ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಉದ್ಯೋಗ ನೀಡಲಾಗುವುದು. ಆಯ್ದ ಸ್ವ-ಸಹಾಯ ಸಂಘಗಳಿಗೆ ತಲಾ 1.5 ಲಕ್ಷ ರೂ. ನೆರವು, 500 ಕೋಟಿ ರೂ. ಅನುದಾನ. ಪರಿಶಿಷ್ಟ ಜಾತಿ ಮತ್ತು ಪಂಗಡದವರ ಗುಂಪುಗಳಿಗೆ ವಿಶೇಷ ಆದ್ಯತೆ, 3.9 ಲಕ್ಷ ಮಹಿಳೆಯರಿಗೆ ಅನುಕೂಲ, ಮಹಿಳಾ ಸ್ವ-ಸಹಾಯ ಸಂಘಗಳಿಗೆ ವಾಣಿಜ್ಯ ಬ್ಯಾಂಕುಗಳಿಂದ ಸಾಲ ಸೌಲಭ್ಯ ಒದಗಿಸಲು ಏಕಗವಾಕ್ಷಿ ಸಾಲ ಸೌಲಭ್ಯ ವ್ಯವಸ್ಥೆ ಮಾಡಲಾಗುವುದು.
ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳ ಬ್ರ್ಯಾಂಡಿಂಗ್, ಮೌಲ್ಯವರ್ಧನೆ, ಪ್ಯಾಕಿಂಗ್ ಸೌಲಭ್ಯ ಒದಗಿಸಿ, ಮಾರುಕಟ್ಟೆ ಒದಗಿಸಲು ಅಸ್ಮಿತೆ ಹೆಸರಿನಡಿ ಎಲ್ಲಾ ಉತ್ಪನ್ನಗಳ ಮಾರಾಟ, ಹೋಬಳಿ ಜಿಲ್ಲೆ ರಾಜ್ಯ ಮಟ್ಟದಲ್ಲಿ ಮಾರಾಟ ಮೇಳ ಆಯೋಜನೆ. ವೇತನ, ವಹಿವಾಟು, ಉದ್ಯೋಗ ಮತ್ತು ರಫ್ತು ಹೆಚ್ಚಳ ಗುರಿಯೊಂದಿಗೆ ಚಿಕ್ಕಬಳ್ಳಾಪುರದಲ್ಲಿ ಚರ್ಮದ ಬೊಂಬೆ, ಧಾರವಾಡದಲ್ಲಿ ಕಸೂತಿ, ಕೊಪ್ಪಳದಲ್ಲಿ ಕೌದಿ ಮತ್ತು ಕಿನ್ಹಾಳ ಬೊಂಬೆ, ಮೈಸೂರಿನಲ್ಲಿ ಅಗರಬತ್ತಿ, ನವಲಗುಂದದಲ್ಲಿ ಜಮಖಾನಾ, ಚನ್ನಪಟ್ಟಣದಲ್ಲಿ ಆಟಿಕೆ ಹಾಗೂ ಇಳಕಲ್, ಗುಳೇದಗುಡ್ಡ, ಬೆಳಗಾವಿ – ಶಹಾಪುರ, ಶಿಡ್ಲಘಟ್ಟ ಮತ್ತು ಮೊಳಕಾಲ್ಮುರಿನಲ್ಲಿ ಸೀರೆ ಮೈಕ್ರೋ ಕ್ಲಸ್ಟರ್ ಅಭಿವೃದ್ದಿ ಮಾಡಲಾಗುವುದು ಎಂದು ಈ ಬಾರಿಯ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…