Karnataka Budget 2022 : 2 ವರ್ಷದಲ್ಲಿ 25 ಲಕ್ಷ ಮನೆಗಳಿಗೆ ನೀರು ಸಂಪರ್ಕ, ಗ್ರಾಮ ಒನ್ ಯೋಜನೆ ರಾಜ್ಯಾದ್ಯಂತ ವಿಸ್ತರಣೆ – Vishwanews24
Karnataka Budget 2022 : 2 ವರ್ಷದಲ್ಲಿ 25 ಲಕ್ಷ ಮನೆಗಳಿಗೆ ನೀರು ಸಂಪರ್ಕ, ಗ್ರಾಮ ಒನ್ ಯೋಜನೆ ರಾಜ್ಯಾದ್ಯಂತ ವಿಸ್ತರಣೆ
2 ವರ್ಷದಲ್ಲಿ 25 ಲಕ್ಷ ಮನೆಗಳಿಗೆ ನೀರು ಸಂಪರ್ಕ ಒದಗಿಸಲಾಗುವುದು, ನಲ್ಲಿಗಳ ಮೂಲಕ ನೀರು ಸಂಪರ್ಕ ಒದಗಿಸಲಾಗುವುದು. ಕುಡಿಯುವ ನೀರು ಸಂಪರ್ಕಕ್ಕೆ 7 ಸಾವಿರ ಕೋಟಿ ರೂ. ಮೀಸಲಿಡಲಾಗಿದ್ದು, ಗ್ರಾಮೀಣ ಭಾಗದ ರಸ್ತೆಗಳ ಸುಧಾರಣೆಗೆ ₹1,600 ಕೋಟಿ ನೀಡಲಾಗುತ್ತಿದೆ. ಮಳೆಗಾಲದಲ್ಲಿ ಹಾನಿಯಾದ ರಸ್ತೆ ಅಭಿವೃದ್ಧಿಗೆ ₹300 ಕೋಟಿ, ಅಮೃತ್ ಗ್ರಾಮ ಪಂಚಾಯಿತಿ ಯೋಜನೆಗೆ ₹188 ಕೋಟಿ, 750 ಗ್ರಾ.ಪಂ.ಗಳಿಗೆ ತಲಾ 25 ಲಕ್ಷ ರೂಪಾಯಿ, ಪ್ರಸಕ್ತ ವರ್ಷದಲ್ಲಿ ರಾಜ್ಯದ 1000 ಕೆರೆಗಳ ಅಭಿವೃದ್ಧಿ, ತಲಾ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ, ಗ್ರಾಮ ಒನ್ ಯೋಜನೆ ರಾಜ್ಯಾದ್ಯಂತ ವಿಸ್ತರಣೆ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
