Karnataka Budget 2022 : ಪೊಲೀಸ್ ಗೃಹ ಯೋಜನೆಗೆ 250 ಕೋಟಿ ರೂ. ಅನುದಾನ, ಅಗ್ನಿಶಾಮಕ ಸಿಬ್ಬಂದಿ ವಿಮೆ ಮೊತ್ತ ಹೆಚ್ಚಳ – Vishwanews24
Karnataka Budget 2022 : ಪೊಲೀಸ್ ಗೃಹ ಯೋಜನೆಗೆ 250 ಕೋಟಿ ರೂ. ಅನುದಾನ, ಅಗ್ನಿಶಾಮಕ ಸಿಬ್ಬಂದಿ ವಿಮೆ ಮೊತ್ತ ಹೆಚ್ಚಳ
ಪೊಲೀಸ್ ಗೃಹ ಯೋಜನೆಗೆ 250 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ. 2ನೇ ಹಂತದಲ್ಲಿ 250 ಕೋಟಿ ರೂಪಾಯಿ ಮಿಸಲಿಡಲಾಗಿದ್ದು, ಮೊಬಿಲಿಟಿ ಯೋಜನೆಗೆ 50 ಕೋಟಿ ರೂ. ಅನುದಾನ ನೀಡಲಾಗಿದೆ. ರಾಜ್ಯದಲ್ಲಿ ನೂತನ KSRP ಮಹಿಳಾ ಕಂಪನಿ ಆರಂಭಿಸಲು ಯೋಜನೆ ರೂಪಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ವಿಮೆ ಮೊತ್ತ ಹೆಚ್ಚಳ ಮಾಡಲಾಗಿದ್ದು, 1 ಲಕ್ಷ ರೂಪಾಯಿಯಿಂದ 20 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ. ಇನ್ನು ದಾವಣಗೆರೆಯಲ್ಲಿ SDRF ಆರಂಭಿಸಲಾಗುವುದು, ಕಾರಾಗೃಹದಲ್ಲಿ ಅತ್ಯಾಧುನಿಕ ಉಪಕರಣ ನೀಡುತ್ತೇವೆ, ಕಾರಾಗೃಹಗಳಲ್ಲಿ ಮೊಬೈಲ್ ಜಾಮರ್ ಅಳವಡಿಕೆ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೂತನ ಕಾರಾಗೃಹ ಕಟ್ಟಡಕ್ಕೆ ಅನುಮತಿ ನೀಡಲಾಗಿದೆ.
Karnataka Budget 2022 : ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2100 ಕೋಟಿ ಮೀಸಲು – VIshwanews24
