Karnataka Budget 2023  : ಆಳ ಸಮುದ್ರ ಮೀನುಗಾರಿಕೆಗೆ ಉತ್ತೇಜನಕ್ಕೆ ‘ಮತ್ಸ್ಯಸಿರಿ’ ಯೋಜನೆ ಘೋಷಣೆ – Vishwanews24

Featured, ರಾಜ್ಯ ನ್ಯೂಸ್

 Karnataka Budget 2023  : ಆಳ ಸಮುದ್ರ ಮೀನುಗಾರಿಕೆಗೆ ಉತ್ತೇಜನಕ್ಕೆ ‘ಮತ್ಸ್ಯಸಿರಿ’ ಯೋಜನೆ ಘೋಷಣೆ

ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡನೆ ಮಾಡುತ್ತಿದ್ದಾರೆ.

ಬಜೆಟ್ ಗಾತ್ರ 3 ಲಕ್ಷ 7 ಸಾವಿರ ಕೋಟಿ ರೂ.ಇದ್ದು, ಇದೇ ಮೊದಲ ಬಾರಿಗೆ ದೊಡ್ಡ ಗಾತ್ರದ ಬಜೆಟ್ ಮಂಡಿಸಲಾಗುತ್ತಿದೆ. ಈ ಬಜೆಟ್ ಮುಂದಿನ 25 ವರ್ಷ ದೂರದೃಷ್ಟಿ ಹೊಂದಿದೆ. ಈ ಬಜೆಟ್ ಉತ್ತಮ ಬದುಕಿನ ಭರವಸೆಯಾಗಿದೆ ಎಂದು ಹೇಳಿದ್ದಾರೆ.

ಸೀಮೆ ಎಣ್ಣೆ ಆಧಾರಿತ ದೋಣಿಗಳನ್ನು ಪೆಟ್ರೋಲ್ ದೋಣಿಗಳನ್ನಾಗಿ ಪರಿವರ್ತಿಸಲು​ 40 ಕೋಟಿ ರೂ. ಮೀಸಲಿಡಲಾಗುವುದು. ಇದು ಪರಿವರ್ತನೆಯಾಗುವ ವರೆಗೂ ಸೀಮೆಎಣ್ಣೆ ಸಹಾಯಧನ ಮುಂದುವರಿಸಲಾಗುವುದು.

Karnataka Budget 2023 : ನೇಕಾರ ಸಮ್ಮಾನ್ ಯೋಜನೆಯಡಿ ಸಹಾಯಧನ ಮೊತ್ತ 5 ಸಾವಿರ ರೂ.ಗೆ ಹೆಚ್ಚಳ  – Vishwanews24

ಆಳ ಸಮುದ್ರ ಮೀನುಗಾರಿಕೆಗೆ ಮತ್ಸ್ಯಸಿರಿ ಎಂಬ ಯೋಜನೆ ಆರಂಭಿಸಲಾಗಿದೆ.

ಕೇಂದ್ರ ಸರ್ಕಾರದ ಮತ್ಸ್ಯ ಸಂಪದ ಯೋಜನೆ ಜತೆ ಸಮನ್ವಯಗೊಳಿಸಿ ಈ ಯೋಜನೆ ಜಾರಿಗೊಳಿಸಲಾಗಿದೆ. ಮೀನುಗಾರಿಕೆ ಉತ್ತೇಜನಕ್ಕೆ ಕಾರವಾರದ ಬಳಿ ಸೀ ಫುಡ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ.

ಕರಾವಳಿ ಜಿಲ್ಲೆಯಲ್ಲಿ ಆರ್ಟಿಫಿಶೀಯಲ್ ರಿಫ್ ಸ್ಥಾಪನೆ (ಕೃತಕ ಬಂಡೆಗಳ ಮೂಲಕ ) ಮಾಡಲಾಗುವುದು ಎಂದು ಹೇಳಿದ್ದಾರೆ.

ದೋಣಿಗಳಿಗೆ ಮೋಟಾರ್ ಇಂಜಿನ್ ಅಳವಡಿಕೆ. ನೇಕಾರರು, ಮೀನುಗಾರರಿಗೂ ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ, ಇಸ್ರೋ ಅಭಿವೃದ್ದಿಪಡಿಸಿದ ಜಿಪಿಎಸ್ ದೋಣಿಗಳಿಗೆ ಅಳವಡಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.

Karnataka Budget 2023 : ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ : ಉಚಿತ ಬಸ್ ಪಾಸ್ ವಿತರಣೆ – Vishwanews24

Leave a Reply