Karnataka Budget 2023: ರಾಜ್ಯದ ರೈತರಿಗೆ ಬಡ್ಡಿ ರಹಿತ ಅಲ್ಪಾವಧಿ ಸಾಲ 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಳ – Vishwanews24

Featured, ರಾಜ್ಯ ನ್ಯೂಸ್

Karnataka Budget 2023: ರಾಜ್ಯದ ರೈತರಿಗೆ ಬಡ್ಡಿ ರಹಿತ ಅಲ್ಪಾವಧಿ ಸಾಲ 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಳ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಡಿಸುತ್ತಿರುವಂತ ಬಜೆಟ್ ನಲ್ಲಿ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ರೈತರಿಗೆ ನೀಡುತ್ತಿರುವಂತ ಬಡ್ಡಿರಹಿತ ಅಲ್ಪಾವಧಿ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸುತ್ತಿರೋದಾಗಿ ಘೋಷಿಸಿದ್ದಾರೆ.

ಈ ವರ್ಷದಿಂದ ರೈತರಿಗೆ ನೀಡುವ ಬಡ್ಡಿರಹಿತ ಅಲ್ಪಾವಧಿ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷಗಳಿಗೆ ಹೆಚ್ಚಿಸಲಾಗುವುದು. ಇದರಿಂದ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ರೈತರಿಗೆ ಸುಲಭವಾಗಲಿದೆ ಎಂದರು.

ಅಗತ್ಯಕ್ಕೆ ತಕ್ಕಂತೆ ಸಾಲ ಸೌಲಭ್ಯ ದೊರಕಿಸಿದಂತೆ ಸಾಲ ಹೆಚ್ಚಳದಿಂದ ರೈತರಿಗೆ ಆಗಲಿದೆ. ಈ ವರ್ಷ 30 ಲಕ್ಷಕ್ಕಿಂತ ಹೆಚ್ಚಿನ ತರಿಗೆ 25,000 ಕೋಟಿ ರೂಗಳಷ್ಟು ಸಾಲ ವಿತರಿಸಲಾಗುವುದು ಎಂದರು.

Karnataka Budget 2023 : ಕನ್ನಡಿಗರಿಗೆ ಸಿಎಂ ಬೊಮ್ಮಾಯಿ ಭರ್ಜರಿ ಗುಡ್ ನ್ಯೂಸ್ : ಎಲ್ಲಾ ವಿವಿಗಳಲ್ಲಿ ಕನ್ನಡದಲ್ಲಿ ಪರೀಕ್ಷೆ – Vishwanews24

ಇನ್ನೂ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಭೂ ಸಿರಿ ಎಂಬ ನೂತನ ಯೋಜನೆಯಡಿ 2023-24ನೇ ಸಾಲಿನಿಂದ 10 ಸಾವಿರ ರೂ ಗಳ ಹೆಚ್ಚುವರಿ ಸಹಾಯ ಧನ ನೀಡಲು ನಿರ್ಧರಿಸಿದ್ದೇವೆ. ತುರ್ತು ಸಂದರ್ಭಗಳಲ್ಲಿ ರೈತರಿಗೆ ಬೀಜ, ರಸಗೊಬ್ಬರ, ಕ್ರಿಮಿನಾಶಕ ಮುಂತಾದ ಪರಿಕರಗಳ್ನು ಖರೀದಿಸಲು ಇದರಿಂದ ಅನುಕೂಲವಾಗಲಿದೆ. ಈ ಮೊತ್ತದಲ್ಲಿ ರಾಜ್ಯ ಸರ್ಕಾರದ 2,500 ರೂ ಹಾಗೂ ನಬಾರ್ಡ್ ನ 7,500 ರೂ ಸೇರಿದ್ದು, ರಾಜ್ಯದ ಸುಮಾರು 50 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದರು.

 Karnataka Budget 2023  : ಆಳ ಸಮುದ್ರ ಮೀನುಗಾರಿಕೆಗೆ ಉತ್ತೇಜನಕ್ಕೆ ‘ಮತ್ಸ್ಯಸಿರಿ’ ಯೋಜನೆ ಘೋಷಣೆ – Vishwanews24

Leave a Reply