Karnataka Budget 2023 – ಮುಖ್ಯಮಂತ್ರಿ ವಿದ್ಯಾಶಕ್ತಿ’ ಯೋಜನೆ ಜಾರಿ : ಪದವಿ ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ – Vishwanews24
Karnataka Budget 2023 – ಮುಖ್ಯಮಂತ್ರಿ ವಿದ್ಯಾಶಕ್ತಿ’ ಯೋಜನೆ ಜಾರಿ : ಪದವಿ ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಎರಡನೇ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ.
ಈ ಬಜೆಟ್ ಉತ್ತಮ ಬದುಕಿನ ಭರವಸೆಯಾಗಿದೆ. ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು. ಮೊದಲು 3 ಲಕ್ಷ ರೂ.ವರೆಗೆ ಇದ್ದ ಸಾಲವನ್ನು 5 ಲಕ್ಷ ರೂ.ವರೆಗೆ ಹೆಚ್ಚಿಸಲಾಗಿದೆ.
ಆರ್ಥಿಕವಾಗಿ ಹಿಂದುಳಿದವರಿಗೆ ವಸತಿ ಯೋಜನೆ, ನೆಲೆ ಯೋಜನೆಯಡಿ 10 ಸಾವಿರ ಸೈಟ್ ವಿತರಣೆ ಮಾಡಲಾಗುವುದ. ಪ್ರತಿ ಗ್ರಾ.ಪಂಗೆ10 ಲಕ್ಷ ರೂ. ಬೆಂಗಳೂರು ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ನೇಕಾರ ಸಮ್ಮಾನ್ ಯೋಜನೆಯಡಿ ಸಹಾಯಧನ ಮೊತ್ತವನ್ನು 3 ಸಾವಿರ ರೂ.ನಿಂದ 5 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ವಿದ್ಯಾಶ್ತಿ ಯೋಜನೆ ಜಾರಿ ಮಾಡಲಾಗಿದ್ದು, ಈ ಯೋಜನೆ ಮೂಲಕಸರ್ಕಾರಿ ಪದವಿ ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ, ಉಚಿತ ಉನ್ನತ ಶಿಕ್ಷಣ ಯೋಜನೆ ಜಾರಿ, 9556 ಶಾಲಾ ಕೊಠಡಿಗಳ ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
