Karnataka Budget 2025: ಗರ್ಭಕಂಠದ ಕ್ಯಾನ್ಸ್ರ್ ತಡೆಗೆ ಉಚಿತ ಲಸಿಕೆ – vishwanews24
Karnataka Budget 2025: ರಾಜ್ಯದಲ್ಲಿ `ಗರ್ಭಕಂಠದ ಕ್ಯಾನ್ಸ್ರ್’ ತಡೆಗಟ್ಟಲು 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆ : CM
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನುಮಂಡಿಸುತ್ತಿದ್ದು, ರಾಜ್ಯಾದ್ಯಂತ ಗರ್ಭಕಂಠದ ಕ್ಯಾನ್ಸರ್ ತಡೆಗೆ ̆ 14 ವರ್ಷದ ಹೆಣ್ಣುಮಕ್ಕಳಗಿ HPV ಲಸಿಕೆ ನೀಡಲಾಗುವುದು ಎಂದು ಘೋಷಿಸಿದ್ದಾರೆ.
2025-26 ನೇ ಸಾಲಿನಲ್ಲಿ ಆರೋಗ್ಯ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು. ಮಹಿಳೆಯರ ಆರೋಗ್ಯದ ಬಗ್ಗೆ ಹಲವು ಮಹತ್ವದ ಯೋಜನೆಗಳನ್ನು ಘೊಷಿಸಿದ್ದಾರೆ. ಪ್ರಸವ ಪೂರ್ವ ಮತ್ತು ನವಜಾತ ಶಿಶುಗಳಲ್ಲಿ ಅಪರೂಪದ ಚಯಾಪಚಯ ಖಾಯಿಲೆಗಳನ್ನು (Rare Metabolic Disorder) ಪತ್ತೆ ಹಚ್ಚಲು ಕಾರ್ಯಕ್ರಮವನ್ನು ರೂಪಿಸಲಾಗುವುದು. ಮೊದಲನೆಯ ಹಂತದಲ್ಲಿ ಕಲ್ಯಾಣ ಕರ್ನಾಟಕ ಮತ್ತು ಗಣಿಬಾಧಿತ ಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ 10 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದರು.
ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸ್ರ್ ಅನ್ನು ತಡೆಗಟ್ಟಲು ಪ್ರಥಮ ಹಂತದಲ್ಲಿ ಗಣಿ ಬಾಧಿತ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ 20 ತಾಲ್ಲೂಕುಗಳಲ್ಲಿ 9 ಕೋಟಿ ರೂ. ವೆಚ್ಚದಲ್ಲಿ 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆಯನ್ನು ನೀಡಲಾಗುವುದು. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
