Karnataka Budget 2025 : ಬೆಂಗಳೂರು ವಿವಿಗೆ ‘ಮನಮೋಹನ್ ಸಿಂಗ್ ಯೂನಿವರ್ಸಿಟಿʼ ಎಂದು ಮರುನಾಮಕರಣ : ಸಿಎಂ ಸಿದ್ದರಾಮಯ್ಯ – vishwanews24
Karnataka Budget 2025 : ಬೆಂಗಳೂರು ವಿವಿಗೆ ‘ಮನಮೋಹನ್ ಸಿಂಗ್ ಯೂನಿವರ್ಸಿಟಿʼ ಎಂದು ಮರುನಾಮಕರಣ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು. ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆರ್.ಸಿ. ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ.
ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ (Centre of Excellence) ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ವಿಶ್ವಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
Karnataka Budget 2025 : ಪ್ರವಾಸಿ ತಾಣಗಳ ಅಭಿವೃದ್ಧಿಗೆ 50 ಕೋಟಿ ರೂ. ಅನುದಾನ – vishwanews24
