Karnataka Budget 2025: ಬ್ರ್ಯಾಂಡ್ ಬೆಂಗಳೂರು, 21 ಯೋಜನೆಗಳಿಗೆ ಅನುಮೋದನೆ – vishwanews24

Featured, ರಾಜ್ಯ ನ್ಯೂಸ್

Karnataka Budget 2025: ಬ್ರ್ಯಾಂಡ್ ಬೆಂಗಳೂರು, 21 ಯೋಜನೆಗಳಿಗೆ ಅನುಮೋದನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ  ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26  ಅನ್ನು ಮಂಡಿಸುತ್ತಿದ್ದಾರೆ.

ಬ್ರ್ಯಾಂಡ್ ಬೆಂಗಳೂರು, 21 ಯೋಜನೆಗಳಿಗೆ ಅನುಮೋದನೆ

ಉಪ-ವಿಧಿಗಳು 2025ರ ಅನುಷ್ಠಾನದಿಂದ ವಾರ್ಷಿಕ 750 ಕೋಟಿ ರೂ. ಆದಾಯವನ್ನು ನಿರೀಕ್ಷಿಸಲಾಗಿದೆ. 40000 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಸುರಂಗ ಮಾರ್ಗ (Tunnel) ಕಾರಿಡಾರ್‌ ನಿರ್ಮಾಣಕ್ಕೆ ಸರ್ಕಾರದಿಂದ ಬಿ.ಬಿ.ಎಂ.ಪಿಗೆ 19 ಸಾವಿರ ಕೋಟಿ ರೂ. ಗ್ಯಾರಂಟಿ ಒದಗಿಸಲಾಗುವುದು.

ನಮ್ಮ ಮೆಟ್ರೋ ಹಂತ-3 ಯೋಜನೆಯೊಂದಿಗೆ 40.50 ಕಿ.ಮಿ. ಉದ್ದದ ಡಬಲ್‌-ಡೆಕ್ಕರ್‌ ಮೇಲು ಸೇತುವೆಯನ್ನು 8916 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ.

“ಬ್ರ್ಯಾಂಡ್ ಬೆಂಗಳೂರು” ಯೋಜನೆಯಡಿ, 1,800 ಕೋಟಿ ರೂ. ಮೊತ್ತದ 21 ಯೋಜನೆಗಳಿಗೆ ಅನುಮೋದನೆ. 413 ಕೋಟಿ ರೂ. ವೆಚ್ಚದಲ್ಲಿ “ಸಮಗ್ರ ಆರೋಗ್ಯ ಯೋಜನೆ” ಜಾರಿ.

ಬೆಂಗಳೂರು ನಗರದಲ್ಲಿ ವ್ಯವಸ್ಥಿತ ಒಳಚರಂಡಿ ಜಾಲ ಮತ್ತು ಎಸ್.ಟಿ.ಪಿ ನಿರ್ಮಿಸಲು 3 ಸಾವಿರ ಕೋಟಿ ರೂ. ಆರ್ಥಿಕ ನೆರವು.

Karnataka Budget 2025:  ಪತ್ರಕರ್ತರಿಗೆ `ಮಾಧ್ಯಮ ಸಂಜೀವಿನಿ ಯೋಜನೆ’ ಘೋಷಿಸಿದ CM  – vishwanews24

ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆಯಿಂದ 50 ಲಕ್ಷ ಜನರಿಗೆ ನೀರು ಪೂರೈಕೆ.

ಕಾವೇರಿ 6ನೇ ಹಂತ ಯೋಜನೆ ಅನುಷ್ಠಾನಗೊಳಿಸಲು ವಿಸ್ತೃತ ಯೋಜನಾ ವರದಿ ತಯಾರಿಕೆ BWSSB ವತಿಯಿಂದ ಬಯೋಗ್ಯಾಸ್-ಆಧಾರಿತ ಆದಾಯ ಮತ್ತು ಕಾರ್ಬನ್ ಕ್ರೆಡಿಟ್‌ಗಳ ಉಪಯೋಗ ಪಡೆಯಲು PPP ಮಾದರಿಯಲ್ಲಿ ಯೋಜನೆ.

ಬೆಂಗಳೂರು ಬಿಸ್‌ನೆಸ್‌ ಕಾರಿಡಾರ್‌ 73 ಕಿ.ಮೀ ಉದ್ದದ ರಸ್ತೆ ನಿರ್ಮಾಣಕ್ಕೆ 27 ಸಾವಿರ ಕೋಟಿ ರೂ. ಯೋಜನೆ.

ಮುಂದಿನ ಎರಡು ವರ್ಷಗಳಲ್ಲಿ ಒಟ್ಟಾರೆ 98.60 ಕಿ.ಮೀ ಹೆಚ್ಚುವರಿ ನಮ್ಮ ಮೆಟ್ರೋ ಜಾಲ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

Karnataka Budget 2025: ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಮೂಲಸೌಕರ್ಯಕ್ಕೆ 50 ಕೋಟಿ ರೂ. ಮೀಸಲು – vishwanews24

Leave a Reply