Featured

Karnataka Budget 2025: ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡುವುದಕ್ಕಾಗಿ ಮೀನುಗಾರಿಕಾ ನೀತಿ: ಸಿದ್ದರಾಮಯ್ಯ – vishwanews24

Karnataka Budget 2025: ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡುವುದಕ್ಕಾಗಿ ಮೀನುಗಾರಿಕಾ ನೀತಿ: ಸಿದ್ದರಾಮಯ್ಯ

ಆಳ ಸಮುದ್ರ ಮೀನುಗಾರಿಕೆ ದೋಣಿಗಳ ಉದ್ದದ ಮಿತಿ ಸಡಿಲಿಸಲು ಕ್ರಮ

ಮೈಸೂರಿನಲ್ಲಿ ಹೈ-ಟೆಕ್ ಮತ್ಸ್ಯದರ್ಶಿನಿ

ಬೆಂಗಳೂರು: ರಾಜ್ಯದ ಮತ್ಸ್ಯ ಸಂಪತ್ತಿನ ರಕ್ಷಣೆಯೊಂದಿಗೆ ಸುಸ್ಥಿರ ಮೀನುಗಾರಿಕೆ ಹಾಗೂ ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು ಮೀನುಗಾರಿಕಾ ನೀತಿಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ ಆಯವ್ಯಯ ಮಂಡಿಸುತ್ತಿದ್ದಾರೆ.

ಆಳ ಸಮುದ್ರ ಮೀನುಗಾರಿಕೆಯನ್ನು ಪ್ರೋತ್ಸಾಹಿಸಲು ಪ್ರಸಕ್ತ ಇರುವ ಮೀನುಗಾರಿಕೆ ದೋಣಿಗಳ ಉದ್ದದ ಮಿತಿಯನ್ನು ಸಡಿಲಿಸಲು ಕ್ರಮ ವಹಿಸಲಾಗುವುದು. ಮಂಗಳೂರಿನಲ್ಲಿರುವ ಮೀನುಗಾರಿಕೆ ಕಾಲೇಜಿಗೆ ಪ್ರಸಕ್ತ ನಿಗದಿಪಡಿಸಿರುವ ವಿದ್ಯಾರ್ಥಿಗಳ ಸಂಖ್ಯಾಬಲವನ್ನು ದ್ವಿಗುಣಗೊಳಿಸಲಾಗುವುದು ಎಂದವರು ತಿಳಿಸಿದರು.

ಕರಾವಳಿ ಜಿಲ್ಲೆಗಳಲ್ಲಿನ ಮೀನುಗಾರಿಕೆ ಕೊಂಡಿ ರಸ್ತೆಗಳನ್ನು ನಬಾರ್ಡ್ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲು 30 ಕೋಟಿ ರೂ. ಒದಗಿಸಲಾಗುವುದು. ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಆಯ್ದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಜೆಟ್ ನಲ್ಲಿ ಘೋಷಿಸಿದರು.

ರಾಜ್ಯದಲ್ಲಿ ನೋಂದಣಿಯಾಗಿರುವ ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಕಾಲಾವಧಿ ಮೀರಿರುವ ಹಳೆಯ ಇಂಜಿನ್ ಗಳನ್ನು ಬದಲಾಯಿಸಿ, ಹೊಸ ಇಂಜಿನ್ ಖರೀದಿಸಲು ಶೇ.50ರಷ್ಟು ಒಂದು ಲಕ್ಷ ರೂ. ಮಿತಿಗೊಳಪಟ್ಟು ಸಹಾಯಧನ ನೀಡಲಾಗುವುದು. ಪ್ರವಾಸಿಗರಿಗೆ ಶುಚಿ-ರುಚಿಯಾದ ಪೌಷ್ಟಿಕ ಮೀನು ಖಾದ್ಯಗಳನ್ನು ಒದಗಿಸಲು ಮೈಸೂರಿನಲ್ಲಿ ಹೈ-ಟೆಕ್ ಮತ್ಸ್ಯದರ್ಶಿನಿಯನ್ನು ಪ್ರಾರಂಭಿಸಲಾಗುವುದು. ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ವಾಹನ ದಟ್ಟಣೆಯನ್ನು ನಿರ್ವಹಿಸಲು ‘ಮಲ್ಟಿ-ಲೆವೆಲ್ ಪಾರ್ಕಿಂಗ್’ ವ್ಯವಸ್ಥೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago