Karnataka Budget 2025: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ; 5267 ಶಿಕ್ಷಕರ ಹುದ್ದೆಗಳ ಭರ್ತಿ – vishwanews24
Karnataka Budget 2025: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ; 5267 ಶಿಕ್ಷಕರ ಹುದ್ದೆಗಳ ಭರ್ತಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನುಮಂಡಿಸುತ್ತಿದ್ದು, ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ 5267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು, ತರ್ಕಬದ್ದಗೊಳಿಸಿ 5000 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.
Karnataka Budget 2025: ಬ್ರ್ಯಾಂಡ್ ಬೆಂಗಳೂರು, 21 ಯೋಜನೆಗಳಿಗೆ ಅನುಮೋದನೆ – vishwanews24
ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಗೌರವಧನವನ್ನು 2,000 ರೂ. ಹೆಚ್ಚಳ ಮಾಡಲಾಗುವುದು. ರಾಜ್ಯದ 37 ಲಕ್ಷ ಮಕ್ಕಳ ಆರೈಕೆ ಮತ್ತು ಕಲಿಕೆಯಲ್ಲಿ ಮಹತ್ತರ ಪಾತ್ರವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತರ ಗೌರವಧನ 1,000 ರೂ. ಹಾಗೂ ಸಹಾಯಕಿಯರ ಗೌರವಧನವನ್ನು 700 ರೂ.ಗೆ ಹೆಚ್ಚಳ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಕುವೆಂಪು ಅವರ ಕವನದ ಮೂಲಕ ಬಜೆಟ್ ಮಂಡನೆ ಆರಂಭಿಸಿರುವ ಸಿಎಂ ಸಿದ್ದರಾಮಯ್ಯ ಅವರು, 6 ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು, ಗ್ಯಾರಂಟಿ ಯೋಜನೆಗಳ ಇತರ ಜನಪರ ಯೋಜನೆಗಳನ್ನು ಜಾರಿಗೆ ತರಲಾಗುವುದು. ಈ ಬಾರಿ ಬಜೆಟ್ 4 ಲಕ್ಷ ಕೋಟಿ ರೂ. ಇದೆ. ಕೃಷಿ ಮತ್ತು ಇನ್ನಿತರ ದಾಖಲೀಕರಣ ಸೇರಿದಂತೆ ಗ್ರಾಮೀಣ ಜನರ ಅಭಿವೃದ್ಧಿಗೆ ಶ್ರಮಿಸಲಾಗುವುದು, ಶಿಕ್ಷಣ, ಆರೋಗ್ಯಕ್ಕೆ ಒತ್ತು ನೀಡಲಾಗುವುದು, ನಗರಾಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
