Featured

Karnataka Budget 2025 :1.81 ಲಕ್ಷ ರೈತರಿಗೆ 440 ಕೋಟಿ ಸಹಾಯಧನ ; ಕೃಷಿ ಕ್ಷೇತ್ರಕ್ಕೆ ಹೊಸ ಘೋಷಣೆಗಳೇನು?  ಇಲ್ಲಿದೆ ಮಾಹಿತಿ – vishwanews24

Karnataka Budget 2025 : 1.81 ಲಕ್ಷ ರೈತರಿಗೆ 440 ಕೋಟಿ ಸಹಾಯಧನ

ಹನಿ, ತುಂತುರು ನೀರಾವರಿ ಘಟಕ ಅಳವಡಿಕೆ ಯೋಜನೆ

ರಾಜ್ಯದಲ್ಲಿ 6,000 ಕಿರು ಆಹಾರ ಸಂಸ್ಕರಣಾ ಘಟಕ ಸ್ಥಾಪನೆ

ಕೃಷಿ ಕ್ಷೇತ್ರಕ್ಕೆ ಹೊಸ ಘೋಷಣೆಗಳೇನು?  ಇಲ್ಲಿದೆ ಮಾಹಿತಿ

ಬೆಂಗಳೂರು: 2025-26ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಈ ಬಾರಿ ಕೃಷಿ ಕ್ಷೇತ್ರಕ್ಕೂ ಬಂಪರ್‌ ಕೊಡುಗೆಗಳನ್ನ ಘೋಷಣೆ ಮಾಡಿದ್ದಾರೆ.

ಹನಿ ಮತ್ತು ತುಂತುರು ನೀರಾವರಿ ( ಘಟಕ ಅಳವಡಿಕೆಗೆ ಕೃಷಿ ಇಲಾಖೆಯಿಂದ ಒಟ್ಟು 1.81 ಲಕ್ಷ ರೈತರಿಗೆ 440 ಕೋಟಿ ರೂ. ಸಹಾಯಧನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಕೃಷಿ ಕ್ಷೇತ್ರಕ್ಕೆ ಹೊಸ ಘೋಷಣೆಗಳೇನು?
* ರೈತ ಸಮೃದ್ಧಿ ಯೋಜನೆಯಡಿ 10 ಕೃಷಿ ಹವಾಮಾನ ವಲಯಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿ ಪ್ರಾತ್ಯಕ್ಷಿಕೆ ತಾಕುಗಳ ಅಭಿವೃದ್ಧಿ ಮಾಡಲಾಗುವುದು.
* ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 428 ಕೋಟಿ ರೂ. ವೆಚ್ಚದಲ್ಲಿ 50 ಸಾವಿರ ರೈತರಿಗೆ ಸಹಾಯಧನ ಸೌಲಭ್ಯ ಕಲ್ಪಿಸುವುದು.
* ತೊಗರಿ ಉತ್ಪಾದನೆ ಉತ್ತೇಜನಕ್ಕೆ 88 ಕೋಟಿ ರೂ. ಒದಗಿಸಲಾಗುವುದು.
* ರಾಜ್ಯದಲ್ಲಿ 6,000 ಕಿರು ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆ ಮಾಡಲಾಗುವುದು.
* ಕೃಷಿ ಭಾಗ್ಯ ಯೋಜನೆಯಡಿ 12 ಸಾವಿರ ಕೃಷಿ ಹೊಂಡ ನಿರ್ಮಾಣ ಗುರಿ ಹೊಂದಲಾಗಿದೆ.
* ಬೆಳೆಗಳ ಕುರಿತು ನಿಖರ ತೀರ್ಮಾನ ಕೈಗೊಳ್ಳಲು ನೆರವು ನೀಡುವ ಡಿಜಿಟಲ್‌ ಕೃಷಿ ಸೇವೆಗಳ ಕೇಂದ್ರ ಸ್ಥಾಪಿಸಲಾಗುವುದು.
* ಕೃಷಿ ಹವಾಮಾನ ವಲಯಗಳ ವರ್ಗೀಕರಣವನ್ನು ಮರುವ್ಯಾಖ್ಯಾನಗೊಳಿಸಲು ತಜ್ಞರ ಸಮಿತಿ ರಚನೆ ಮಾಡಲಾಗುವುದು.
* ರೈತರ ಜೀವನೋಪಾಯ ಸುಧಾರಣೆಗೆ ಸಮಗ್ರ ಮಳೆಯಾಶ್ರಿತ ಕೃಷಿ ನೀತಿ ಜಾರಿ.
* ಕೃಷಿ ಇಲಾಖೆಯ 58 ಪ್ರಯೋಗಾಲಯಗಳ ಬಲವರ್ಧನೆ.

 

* 20 ಕೋಟಿ ರೂ. ವೆಚ್ಚದಲ್ಲಿ ಸಾವಯವ ಮತ್ತು ಸಿರಿಧಾನ್ಯ ಹಬ್‌ಗಳ ಸ್ಥಾಪನೆ ಮಾಡುವುದರ ಜೊತೆಗೆ ಉತ್ತರ ಕನ್ನಡ ಜಿಲ್ಲೆ, ಜೋಯಿಡಾ ತಾಲ್ಲೂಕನ್ನು ಸಾವಯವ ತಾಲ್ಲೂಕಾಗಿ ಪರಿವರ್ತಿಸಲು ಕ್ರಮ.
* ಮಂಡ್ಯ ಕೃಷಿ ವಿಶ್ವವಿದ್ಯಾಲಯ ಮೂಲಸೌಕರ್ಯ ಅಭಿವೃದ್ಧಿಗೆ 25 ಕೋಟಿ ರೂ. ಅನುದಾನ ಮೀಸಲಿಡಲಾಗುವುದು
* ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸ್ಯ ಫೀನೋಟೈಪಿಂಗ್‌ ಸೌಲಭ್ಯ ಕಲ್ಪಿಸಲಾಗುವುದು
* ವಿಜಯಪುರದ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು
* ಅಥಣಿಯಲ್ಲಿ ಕೃಷಿ ಕಾಲೇಜು ಸ್ಥಾಪಿಸುವ ಕುರಿತು ಕಾರ್ಯಸಾಧ್ಯತ ವರದಿ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಣೆ ಮಾಡಿದರು.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

9 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

10 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

10 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

11 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

12 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

12 hours ago