Karnataka Budget 2025: ಕೈಗಾರಿಕಾ ವಲಯದಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿ – ಬಜೆಟ್ನಲ್ಲಿ ಘೋಷಣೆ – vishwanews24
Karnataka Budget 2025: ಕೈಗಾರಿಕಾ ವಲಯದಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿ – ಬಜೆಟ್ನಲ್ಲಿ ಘೋಷಣೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನು ಮಂಡಿಸುತ್ತಿದ್ದು, ಕೈಗಾರಿಕಾ ವಲಯದಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ವಿವಿಧ ಯೋಜನೆಗಳು, ಹೊಸ ಬಂಡವಾಳ ಆಕರ್ಷಿಸುವ ಮೂಲಕ 20 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ ಇದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ 5267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು, ತರ್ಕಬದ್ದಗೊಳಿಸಿ 5000 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.
