Karnataka Budget 2025: ಧಾರ್ಮಿಕ ದತ್ತಿ ಇಲಾಖೆ ಅರ್ಚಕರಿಗೆ ತಸ್ತೀಕ್ ಮೊತ್ತದ ಏರಿಕೆ – vishwanews24
Karnataka Budget 2025: ಧಾರ್ಮಿಕ ದತ್ತಿ ಇಲಾಖೆ ಅರ್ಚಕರಿಗೆ ತಸ್ತೀಕ್ ಮೊತ್ತದ ಏರಿಕೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನು ಮಂಡಿಸುತ್ತಿದ್ದಾರೆ.
ಧಾರ್ಮಿಕ ದತ್ತಿ ಇಲಾಖೆ ಅರ್ಚಕರಿಗೆ ತಸ್ತೀಕ್ ಮೊತ್ತದ ಏರಿಕೆ ಮಾಡಲಾಗಿದೆ. 60 ಸಾವಿರ ರೂ.ನಿಂದ 72 ಸಾವಿರಕ್ಕೆ ತಸ್ತೀಕ್ ಮೊತ್ತ ಏರಿಸಲಾಗುವುದು. ಕರ್ನಾಟಕ ದೇವಾಲಯ ವಸತಿ ಕೋಶ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ದೇವಾಲಯಗಳ ಛತ್ರಗಳಲ್ಲಿ ರೂಮ್ ಬುಕಿಂಗ್ಗೆ ವ್ಯವಸ್ಥೆ ಕಲ್ಪಿಸಲಾಗುವುದು. ರಾಜ್ಯದಲ್ಲಿ ಒತ್ತುವರಿಯಾಗಿರುವ ದೇಗುಲಗಳ ಆಸ್ತಿ ರಕ್ಷಿಸಲು, ಭೂವರಾಹ ಯೋಜನೆಯಡಿ ಸ್ಥಿರಾಸ್ತಿ ದಾಖಲೀಕರಣಗೊಳಿಸಲು ಕ್ರಮವಹಿಸಲಾಗುವುದು. ಪ್ರವಾಸೋದ್ಯೋಮ ತಾಣವಾಗಿ ಚಂದ್ರಗುತ್ತಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು.
Karnataka Budget 2025: ಬಜೆಟ್ನಲ್ಲಿ ಎಸ್ಸಿಎಸ್ಪಿ- ಟಿಎಸ್ಪಿ ಅನುದಾನ ಘೋಷಣೆ – vishwanews24
