Karnataka Budget – ಮದ್ಯ ಪ್ರಿಯರಿಗೆ ಶಾಕ್ : ರಾಜ್ಯ ಬಜೆಟ್ನಲ್ಲಿ ಮದ್ಯದರ ಹೆಚ್ಚಳ – Vishwanews24
Karnataka Budget – ಮದ್ಯ ಪ್ರಿಯರಿಗೆ ಶಾಕ್ : ರಾಜ್ಯ ಬಜೆಟ್ನಲ್ಲಿ ಮದ್ಯದರ ಹೆಚ್ಚಳ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ 15ನೇ ಬಜೆಟ್ ಮಂಡನೆ ಮಾಡುತ್ತಿದ್ದು, ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದಾರೆ.
ಮದ್ಯದ ಘೋಷಿತ ಸ್ಲಾಬ್ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML, ಬಿಯರ್ ಸ್ಲಾಬ್ ಪರಿಷ್ಕರಣೆ ಮಾಡುವುದಾಗಿ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಇನ್ನು 2023-24ನೇ ಸಾಲಿನ ಜನವರಿ ತಿಂಗಳ ಅಂತ್ಯದವರೆಗೆ ಅಬಕಾರಿ ತೆರಿಗೆಯಿಂದ 28,181 ಕೋಟಿ ರೂ.ಗಳು ಸ್ವೀಕೃತವಾಗಿದ್ದು, 2024-25ನೇ ಸಾಲಿಗೆ 38,525 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ ಎಂದಿದ್ದಾರೆ.
