Kerala : ಪಕ್ಷದೊಳಗಿನ ಗುಂಪುಗಾರಿಕೆಯಿಂದ ಕೆಲಸ ಮಾಡಲು ಸಾಧ್ಯವಿಲ್ಲ ; ಕಾಂಗ್ರೆಸ್ ಗೆ ಪಿಸಿ ಚಾಕೋ ರಾಜೀನಾಮೆ -Vishwanews24
Kerala : ಪಕ್ಷದೊಳಗಿನ ಗುಂಪುಗಾರಿಕೆಯಿಂದ ಕೆಲಸ ಮಾಡಲು ಸಾಧ್ಯವಿಲ್ಲ ; ರಾಜೀನಾಮೆ ನೀಡಿದ ಕಾಂಗ್ರೆಸ್ ಮುಖಂಡ ಪಿಸಿ ಚಾಕೋ -Vishwanews24
ತಿರುವನಂತಪುರಂ: ಕಾಂಗ್ರೆಸ್ ಪಕ್ಷದೊಳಗಿನ ಗುಂಪುಗಾರಿಕೆಯಿಂದ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಪಿಸಿ ಚಾಕೋ ಬುಧವಾರ(ಮಾರ್ಚ್ 10) ಪಕ್ಷಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಿಸಿದ್ದಾರೆ.
ರಾಜೀನಾಮೆ ಪತ್ರವನ್ನು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರವಾನಿಸಿದ್ದು, ಕೇರಳ ವಿಧಾನಸಭಾ ಚುನಾವಣೆಗೂ ಮುನ್ನ ಚಾಕೋ ಅವರ ರಾಜೀನಾಮೆ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಆಘಾತ ತಂದೊಡ್ಡಿದೆ ಎಂದು ವರದಿ ತಿಳಿಸಿದೆ.
ಎಎನ್ ಐ ನ್ಯೂಸ್ ಏಜೆನ್ಸಿ ವರದಿ ಪ್ರಕಾರ, ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ನನ್ನ ರಾಜೀನಾಮೆ ಪತ್ರವನ್ನು ಸೋನಿಯಾ ಗಾಂಧಿಗೆ ಕಳುಹಿಸಿರುವುದಾಗಿ ತಿಳಿಸಿದ್ದಾರೆ. ಪಿಸಿ ಚಾಕೋ(74) ಕಾಂಗ್ರೆಸ್ ಪಕ್ಷದ ವಕ್ತಾರ ಹಾಗೂ ತ್ರಿಶ್ಶೂರ್ ನ ಮಾಜಿ ಸಂಸದರಾಗಿದ್ದಾರೆ.
2021 ರ ಮಾರ್ಚ್ 11 ರ ಗುರುವಾರ ಮಹಾಶಿವರಾತ್ರಿ ಹಬ್ಬ ; ಈ ರೀತಿ ನಿಮ್ಮ ಶಿವರಾತ್ರಿ ವ್ರತ ಆರಂಭವಾಗಲಿ -Vishwanews24
