ತಿರುವನಂತಪುರಂ: ಮದರಸಾದಲ್ಲಿ ಅಪ್ರಾಪ್ತ ಯುವತಿಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿವೆ.
ತನ್ನ ಅಧ್ಯಯನವನ್ನು ಮುಂದುವರಿಸಲು ವಸತಿ ಮದರಸಾರಲ್ಲಿ ವಾಸವಾಗಿದ್ದ ಅಸ್ಮಿಯಾ ಮೋಲ್ ಇತ್ತೀಚೆಗೆ ಹಬ್ಬಕ್ಕೆ ಮನೆಗೆ ಭೇಟಿ ನೀಡಿದಾಗ ಮನೆಯವರ ಬಳಿ ಮದರಸಾದಲ್ಲಿನ ಕಿರುಕುಳದ ಬಗ್ಗೆ ಹೇಳಿದ್ದಳು.
ಇತ್ತೀಚೆಗೆ ಮಧ್ಯರಾತ್ರಿ ಯುವತಿ ತನ್ ತಾಯಿಗೆ ಕರೆ ಮಾಡಿ ಕೂಡಲೇ ಮದರಸಾಕ್ಕೆ ಬನ್ನಿಯೆಂದು ಹೇಳಿದ್ದಾಳೆ. ಮನೆಯವರು ಭೀತಿಯಿಂದ ಮದರಸಾಕ್ಕೆ ತೆರಳಿದ್ದಾರೆ. ಆದರೆ ಮದರಾಸದ ಅಧಿಕಾರಿಗಳು ಅವರನ್ನು ಒಳಗೆ ಹೋಗಲು ಬಿಟ್ಟಿಲ್ಲ. ಕೆಲ ಸಮಯದ ಬಳಿಕ ನಿಮ್ಮ ಮಗಳು ಬಾತ್ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮನೆಯವರಿಗೆ ಮದರಾಸದ ಅಧಿಕಾರಿಗಳು ಹೇಳಿದ್ದಾರೆ.
ಈ ಬಗ್ಗೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ತಮ್ಮ ಮಗಳಿಗೆ ಮದರಾಸದ ಅಧಿಕಾರಿಗಳು ಕಿರುಕುಳ ನೀಡಿದ್ದಾರೆ ಎಂದು ಯುವತಿಯ ಮನೆಯವರು ಆರೋಪಿಸಿದ್ದಾರೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…