KSRTC ನೌಕರರ ಮುಷ್ಕರ:ರಾಜ್ಯದ ಸರ್ಕಾರದ ಪಾಪದ ಫಲವನ್ನು ಜನತೆ ಅನುಭವಿಸಿದಂತಾಗಿದೆ : ಸಿದ್ದರಾಮಯ್ಯ -Vishwanews24

Featured, ರಾಷ್ಟ್ರ ನ್ಯೂಸ್

KSRTC ನೌಕರರ ಮುಷ್ಕರ:ರಾಜ್ಯದ ಸರ್ಕಾರದ ಪಾಪದ ಫಲವನ್ನು ಜನತೆ ಅನುಭವಿಸಿದಂತಾಗಿದೆ : ಸಿದ್ದರಾಮಯ್ಯ

ಇದಕ್ಕೆ ಭ್ರಷ್ಟ ಬಿಜೆಪಿ ಸರ್ಕಾರವೇ ಹೊಣೆ ..

ದುರಾಡಳಿತ ಮತ್ತು ಕೇಂದ್ರದ ಗುಲಾಮಗಿರಿಯಿಂದಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ..

ನವದೆಹಲಿ: ಕೊರೊನಾ ಸಾಂಕ್ರಾಮಿಕದಿಂದ ತತ್ತರಿಸಿ ಹೋಗಿರುವ ರಾಜ್ಯದ ಜನತೆ ಕೆಎಸ್‌ಆರ್‌ಟಿಸಿ‌ ನೌಕರರ ಮುಷ್ಕರದಿಂದಾಗಿ ದುಪ್ಪಟ್ಟು ಕಷ್ಟ ಅನುಭವಿಸುತ್ತಿದ್ದಾರೆ. ಇದಕ್ಕೆ ಭ್ರಷ್ಟ ಬಿಜೆಪಿ ಸರ್ಕಾರವೇ ಹೊಣೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಗುರುವಾರ ಸರಣಿ ಟ್ವೀಟ್‌ ಮಾಡಿರುವ ಅವರು, ‘ಹಿಂದಿನ ಮುಷ್ಕರದ ಸಂದರ್ಭದಲ್ಲಿ ನೌಕರರ ಬೇಡಿಕೆಗಳ ಬಗ್ಗೆ ಸಮ್ಮತಿಸಿದಾಗಲೇ ಅದರ ಪರಿಣಾಮವನ್ನು ರಾಜ್ಯ ಬಿಜೆಪಿ ಸರ್ಕಾರ ಯೋಚಿಸಬೇಕಿತ್ತು. ಆ‌ ಕ್ಷಣದಲ್ಲಿ ಸುಳ್ಳು ಆಶ್ವಾಸನೆ ನೀಡಿ ನಂತರ ಮಾತು ತಪ್ಪಿರುವುದೇ ಈಗಿನ ಸಂಘರ್ಷಕ್ಕೆ ಕಾರಣ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಕಾರ್ಮಿಕ‌ ಸಂಘದ ನಾಯಕರ ಜೊತೆ ಕೂತು ಅವರ ಮ‌ನವೊಲಿಸಿ ಸಮಸ್ಯೆಯನ್ನು ಬಗೆಹರಿಸಬೇಕಿತ್ತು. ಆದರೆ, ರಾಜ್ಯ ಸರ್ಕಾರವು ಖಾಸಗಿ ಬಸ್ ಓಡಿಸುವ, ಎಸ್ಮಾ ಜಾರಿಗೊಳಿಸುವ ಬೆದರಿಕೆಯೊಡ್ಡಿ‌ ಸಂಘರ್ಷಕ್ಕೆ ದಾರಿ ಮಾಡಿಕೊಡುತ್ತಿರುವುದು ದುರದೃಷ್ಟಕರ’ ಎಂದು ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ಕಾಂಗ್ರೆಸ್‌ಗೆ ಎಲ್ಲ ಸಮಾಜದವರೂ ಬೇಕು , ಬಿಜೆಪಿಯವರಂತೆ ನಾವು ಯಾರನ್ನೂ ಬೇರೆಯಾಗಿ ನೋಡುವುದಿಲ್ಲ : ಡಿ.ಕೆ. ಶಿ -Vishwanews24

‘ನೌಕರರ ಬೇಡಿಕೆಗಳನ್ನು ಈಡೇರಿಸಲಾಗದಿರುವುದಕ್ಕೆ ರಾಜ್ಯ ಸರ್ಕಾರ ನೀಡುತ್ತಿರುವ ಆರ್ಥಿಕ ಸಂಕಷ್ಟದ ಕಾರಣವು ಸ್ವಯಂಕೃತ ಅಪರಾಧವಾಗಿದೆ. ತನ್ನ ದುರಾಡಳಿತ ಮತ್ತು ಕೇಂದ್ರದ ಗುಲಾಮಗಿರಿಯಿಂದಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ’ ಎಂದು ಅವರು ಟ್ವೀಟಿಸಿದ್ದಾರೆ.

‘ರಾಜ್ಯ ಸರ್ಕಾರ ತನ್ನ ಪ್ರತಿಷ್ಠೆಯನ್ನು ಬದಿಗಿಟ್ಟು ತಕ್ಷಣ ಕೆಎಸ್‌ಆರ್‌ಟಿಸಿ ಕಾರ್ಮಿಕರ ಜೊತೆ ಮಾತುಕತೆ ನಡೆಸಬೇಕು. ಸಮಸ್ಯೆಯನ್ನು ಸೌಹಾರ್ದತೆಯಿಂದ ಬಗೆಹರಿಸಿ, ಸಾರಿಗೆ ವ್ಯವಸ್ಥೆಯಿಲ್ಲದೆ ಕಷ್ಟನಷ್ಟಕ್ಕಿಡಾಗಿರುವ ಜನತೆಯನ್ನು ರಕ್ಷಿಸಬೇಕು’ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

‘ಆಂತರಿಕ ತಿಕ್ಕಾಟ,‌ ಅಸಾಮರ್ಥ್ಯ ಮತ್ತು ಭ್ರಷ್ಟಾಚಾರಗಳಿಂದಾಗಿ ಹಾದಿತಪ್ಪಿರುವ ರಾಜ್ಯದ ಸರ್ಕಾರದ ಪಾಪದ ಫಲವನ್ನು ಜನತೆ ಅನುಭವಿಸಿದಂತಾಗಿದೆ. ಇದರ ವಿರುದ್ಧ ಸ್ಪಷ್ಟ ಸಂದೇಶವನ್ನು ಉಪಚುನಾವಣೆಯಲ್ಲಿ‌ ಮತದಾರರು ನೀಡಲಿದ್ದಾರೆ’ ಎಂದೂ ವಿರೋಧ ಪಕ್ಷದ ನಾಯಕ ಹೇಳಿದ್ದಾರೆ.

ಸಾರಿಗೆ ನೌಕರರ ಸಮಸ್ಯೆಗಳನ್ನು ತಾಯಿ ಹೃದಯದಿಂದ ನೋಡಬೇಕೆ ಹೊರತು ವೈರಗಳಿಂತಲ್ಲ : ಖಾದರ್ -Vishwanews24