ಬೆಂಗಳೂರು: ದೇಶದಲ್ಲೇ ಪ್ರಥಮ ಎನ್ನುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಪಘಾತದಲ್ಲಿ ಮೃತರಾಗುವಂತ ನೌಕರರಿಗೆ 1 ಕೋಟಿ ವಿಮಾ ಪರಿಹಾರ ಘೋಷಣೆ ಮಾಡಿತ್ತು. ಅದರಂತೆ ಅಪಘಾತದಲ್ಲಿ ಮೃತಪಟ್ಟಂತ ನಾಲ್ವರು ಅವಲಂಭಿತರಿಗೆ ತಲಾ 1 ಕೋಟಿ ವಿಮಾ ಪರಿಹಾರವನ್ನು ವಿತರಿಸಲಾಗಿದೆ.
ಇದಲ್ಲದೇ ಕುಟುಂಬ ಕಲ್ಯಾಣ ಯೋಜನೆಯಡಿ ಸೇವೆಯಲ್ಲಿದ್ದು ಮೃತಪಟ್ಟಂತ 23 ಮಂದಿ ನೌಕರರ ಅವಲಂಭಿತರಿಗೆ ತಲಾ 10 ಲಕ್ಷ ಪರಿಹಾರ ನೀಡಿದೆ.
ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಈ ವಿಮಾ ಪರಿಹಾರ ವಿತರಣೆ ಬಳಿಕ ಮಾತನಾಡಿದಂತ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು, ನಿಗಮದ ವತಿಯಿಂದ ಕಾರ್ಮಿಕರ ಕಲ್ಯಾಣಕ್ಕಾಗಿ ಹಾಗೂ ಪ್ರಯಾಣಿಕರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಿದೆ. ಮೃತಪಟ್ಟವರ ಜೀವ ಅಮೂಲ್ಯವಾದದ್ದು, ಅದನ್ನು ಮರಳಿ ತರಲಾಗುವುದಿಲ್ಲ. ಆದರೆ ಅವರ ಕುಟುಂಬದ ಆರ್ಥಿಕ ಸ್ವಾವಲಂಬನೆಗಾಗಿ ನಿಗಮವು ರೂಪಿಸಿರುವ ಯೋಜನೆ ದೂರದೃಷ್ಠಿಯನ್ನು ಹೊಂದಿರುವುದಾಗಿ ತಿಳಿಸಿದರು. ಈ ಮೊತ್ತವನ್ನು ಸದುಪಯೋಗ ಪಡಿಸಿಕೊಂಡು ಮಕ್ಕಳ ವಿದ್ಯಾಭ್ಯಾಸ ಹಾಗೂ ಮನೆ ಕಟ್ಟಿಕೊಳ್ಳಲು ಉಪಯೋಗಿಸಿಕೊಳ್ಳಿ , ಬೇರೆ ಇತರೆ ಎಲ್ಲೂ ಹಣ ಪೋಲು ಮಾಡದಂತೆ ಎಚ್ಚರವಹಿಸಲು ತಿಳಿಸಿದರು.
ನಿಗಮವು ಯಶಸ್ವಿಯಾಗಿ ಶಕ್ತಿ ಯೋಜನೆ ಅನುಷ್ಠಾನಗೊಳಿಸಲು ಮುಖ್ಯ ಪಾತ್ರ ವಹಿಸಿರುವ ನಿಗಮದ ಚಾಲಕರು,ನಿರ್ವಾಹಕರು, ಸಿಬ್ಬಂದಿಗಳು, ಅಧಿಕಾರಿಗಳು ಹಾಗೂ ಕಾರ್ಮಿಕ ಮುಖಂಡರುಗಳ ಪಾತ್ರ ಅಭಿನಂದನೀಯ ಎಂದು ತಿಳಿಸಿದರು. ನಿಗಮದ ವಿದ್ಯಾ ಚೇತನ ವಿದಾರ್ಥಿ ವೇತನ ಯೋಜನೆಯ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲಿಸುವಂತೆ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದರು.
ಕೆ ಎಸ್ ಆರ್ ಟಿಸಿ ಅಧ್ಯಕ್ಷ ಶ್ರೀನಿವಾಸ್ ಗುಬ್ಬಿ ಅವರು ಮಾತನಾಡಿ ನಿಗಮದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳು ಶ್ರಮ ಜೀವಿಗಳಾಗಿದ್ದು ಅವರಿಗೆ ಸಲ್ಲಬೇಕಾದ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕಾಗಿರುತ್ತದೆ. ಇಂದು ವಿತರಿಸಲಾಗಿರುವ ಪರಿಹಾರ ಮೊತ್ತವನ್ನು ಕುಟುಂಬ ವರ್ಗದವರು ಸಮರ್ಪಕವಾಗಿ ಬಳಸಿಕೊಂಡು ಕುಟುಂಬದ ಆರ್ಥಿಕ ಸ್ವಾವಲಂಬನೆ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ತಿಳಿಸಿದರು.
ಸ್ಥಾಪಕ ನಿರ್ದೇಶಕರು, ಕಾರ್ಮಿಕ ಸಂಘಟನೆಗಳ ಮುಖಂಡರುಗಳಾದ ಅನಂತಸುಬ್ಬರಾವ್, ವಿಜಯಭಾಸ್ಕರ್, ರೇವಪ್ಪ, ಮಂಜುನಾಥ್, ಚಂದ್ರಶೇಖರ್, ನಾಗರಾಜು, ವೆಂಕಟರಮಣಪ್ಪ, ಜಯರಾಜ ಅರಸು ಇತರರು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…