ನವದೆಹಲಿ: ಕೊರೊನಾ ಸಾಂಕ್ರಾಮಿಕದಿಂದ ತತ್ತರಿಸಿ ಹೋಗಿರುವ ರಾಜ್ಯದ ಜನತೆ ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರದಿಂದಾಗಿ ದುಪ್ಪಟ್ಟು ಕಷ್ಟ ಅನುಭವಿಸುತ್ತಿದ್ದಾರೆ. ಇದಕ್ಕೆ ಭ್ರಷ್ಟ ಬಿಜೆಪಿ ಸರ್ಕಾರವೇ ಹೊಣೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಹಿಂದಿನ ಮುಷ್ಕರದ ಸಂದರ್ಭದಲ್ಲಿ ನೌಕರರ ಬೇಡಿಕೆಗಳ ಬಗ್ಗೆ ಸಮ್ಮತಿಸಿದಾಗಲೇ ಅದರ ಪರಿಣಾಮವನ್ನು ರಾಜ್ಯ ಬಿಜೆಪಿ ಸರ್ಕಾರ ಯೋಚಿಸಬೇಕಿತ್ತು. ಆ ಕ್ಷಣದಲ್ಲಿ ಸುಳ್ಳು ಆಶ್ವಾಸನೆ ನೀಡಿ ನಂತರ ಮಾತು ತಪ್ಪಿರುವುದೇ ಈಗಿನ ಸಂಘರ್ಷಕ್ಕೆ ಕಾರಣ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಕಾರ್ಮಿಕ ಸಂಘದ ನಾಯಕರ ಜೊತೆ ಕೂತು ಅವರ ಮನವೊಲಿಸಿ ಸಮಸ್ಯೆಯನ್ನು ಬಗೆಹರಿಸಬೇಕಿತ್ತು. ಆದರೆ, ರಾಜ್ಯ ಸರ್ಕಾರವು ಖಾಸಗಿ ಬಸ್ ಓಡಿಸುವ, ಎಸ್ಮಾ ಜಾರಿಗೊಳಿಸುವ ಬೆದರಿಕೆಯೊಡ್ಡಿ ಸಂಘರ್ಷಕ್ಕೆ ದಾರಿ ಮಾಡಿಕೊಡುತ್ತಿರುವುದು ದುರದೃಷ್ಟಕರ’ ಎಂದು ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.
‘ನೌಕರರ ಬೇಡಿಕೆಗಳನ್ನು ಈಡೇರಿಸಲಾಗದಿರುವುದಕ್ಕೆ ರಾಜ್ಯ ಸರ್ಕಾರ ನೀಡುತ್ತಿರುವ ಆರ್ಥಿಕ ಸಂಕಷ್ಟದ ಕಾರಣವು ಸ್ವಯಂಕೃತ ಅಪರಾಧವಾಗಿದೆ. ತನ್ನ ದುರಾಡಳಿತ ಮತ್ತು ಕೇಂದ್ರದ ಗುಲಾಮಗಿರಿಯಿಂದಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ’ ಎಂದು ಅವರು ಟ್ವೀಟಿಸಿದ್ದಾರೆ.
‘ರಾಜ್ಯ ಸರ್ಕಾರ ತನ್ನ ಪ್ರತಿಷ್ಠೆಯನ್ನು ಬದಿಗಿಟ್ಟು ತಕ್ಷಣ ಕೆಎಸ್‌ಆರ್‌ಟಿಸಿ ಕಾರ್ಮಿಕರ ಜೊತೆ ಮಾತುಕತೆ ನಡೆಸಬೇಕು. ಸಮಸ್ಯೆಯನ್ನು ಸೌಹಾರ್ದತೆಯಿಂದ ಬಗೆಹರಿಸಿ, ಸಾರಿಗೆ ವ್ಯವಸ್ಥೆಯಿಲ್ಲದೆ ಕಷ್ಟನಷ್ಟಕ್ಕಿಡಾಗಿರುವ ಜನತೆಯನ್ನು ರಕ್ಷಿಸಬೇಕು’ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
‘ಆಂತರಿಕ ತಿಕ್ಕಾಟ, ಅಸಾಮರ್ಥ್ಯ ಮತ್ತು ಭ್ರಷ್ಟಾಚಾರಗಳಿಂದಾಗಿ ಹಾದಿತಪ್ಪಿರುವ ರಾಜ್ಯದ ಸರ್ಕಾರದ ಪಾಪದ ಫಲವನ್ನು ಜನತೆ ಅನುಭವಿಸಿದಂತಾಗಿದೆ. ಇದರ ವಿರುದ್ಧ ಸ್ಪಷ್ಟ ಸಂದೇಶವನ್ನು ಉಪಚುನಾವಣೆಯಲ್ಲಿ ಮತದಾರರು ನೀಡಲಿದ್ದಾರೆ’ ಎಂದೂ ವಿರೋಧ ಪಕ್ಷದ ನಾಯಕ ಹೇಳಿದ್ದಾರೆ.
ಸಾರಿಗೆ ನೌಕರರ ಸಮಸ್ಯೆಗಳನ್ನು ತಾಯಿ ಹೃದಯದಿಂದ ನೋಡಬೇಕೆ ಹೊರತು ವೈರಗಳಿಂತಲ್ಲ : ಖಾದರ್ -Vishwanews24
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…