ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಮೊಬೈಲ್ ಫೋನ್ ಸ್ಪೀಕರ್‌ಗಳಲ್ಲಿ ಜೋರಾಗಿ ಹಾಡುಗಳನ್ನು ಪ್ಲೇ ಮಾಡುವುದನ್ನು ನಿಷೇಧಿಸಲಾಗಿದೆ.
ಸರ್ಕಾರಿ ಬಸ್ ಪ್ರಯಾಣದ ವೇಳೆ ಮೊಬೈಲ್ ಫೋನ್ ಬಳಿಸಿ ಪ್ರಯಾಣಿಕರು ಮಾತನಾಡುವುದನ್ನು ನಿಷೇಧಿಸಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಆದೇಶ ಹೊರಡಿಸಿದ್ದಾರೆ.
ಪ್ರಯಾಣದ ವೇಳೆ ಹಾಡು, ಸಿನಿಮಾ ಮುಂತಾದವುಗಳನ್ನು ಜೋರಾಗಿ ಹಾಕುವಂತಿಲ್ಲ. ಒಂದು ವೇಳೆ ಹಾಕಿದರೆ ಮೊದಲು ಬಸ್ ನಿರ್ವಾಹಕ ಪ್ರಯಾಣಕನಲ್ಲಿ ಮನವಿ ಮಾಡಿಕೊಳ್ಳಬೇಕು. ಮನವಿ ಕಡೆಗಣಿಸಿದರೆ ಬಸ್ ಅರ್ಧಕ್ಕೆ ನಿಲ್ಲಿಸಿ ಪ್ರಯಾಣಿಕರನ್ನು ಅಲ್ಲೇ ಇಳಿಸಿ ಮುಂದುವರೆಯ ಬೇಕು.
ಈ ಬಗ್ಗೆ ಏನಾದರು ಸಮಸ್ಯೆಗಳು ಎದುರಾದರೆ ತಕ್ಷಣವೇ ಸ್ಥಳೀಯ ಪೊಲೀಸ್ ಠಾಣೆಗೆ ವಿಷಯ ತಿಳಿಸಬೇಕು. ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ 1989ರ ನಿಯಮ 94(1)V ಪ್ರಕಾರ ಇದು ಕಾನೂನು ಬಾಹಿರವಾಗಿರುವುದರಿಂದ ಬಸ್‌ಗಳಲ್ಲಿ ಜೋರಾಗಿ ಶಬ್ದ ಉಂಟು ಮಾಡಿ ಮೊಬೈಲ್ ಬಳಸುವುದಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದರಿಂದ ಶಬ್ದಮಾಲಿನ್ಯ ಉಂಟಾಗುವದರ ಜೊತೆ ಪ್ರಯಾಣಿಕರಿಗೂ ಕಿರಿಕಿರಿ ಉಂಟಾಗುತ್ತಿರುವ ಬಗ್ಗೆ ಹಲವು ದೂರಗಳ ಹಿನ್ನೆಲೆ, ಕೆಎಸ್ಆರ್ಟಿಸಿ ಈ ಬಗ್ಗೆ ಸುತ್ತೋಲೆ ಹೊರಡಿಸಿ ಆದೇಶಿಸಿದೆ.
ಬಸ್ ಡ್ರೈವರ್‌ಗಳಿಂದ ಸ್ಥಳದಲ್ಲಿಯೇ ದಂಡ ವಸೂಲಿ ಮಾಡಲು ಪೊಲೀಸರು ಮುಂದಾಗುತ್ತಾರೆ ಆದರೆ ಆ ಸಮಯದಲ್ಲಿ ಟ್ರಾಫಿಕ್ ಜಾಮ್ ಉಂಟಾಗಬಹುದು ಅಥವಾ ಚಾಲಕರ ಬಳಿ ದುಡ್ಡು ಇಲ್ಲದೆ ಇರಬಹುದು. ಹೀಗಾಗಿ, ನೇರವಾಗಿ ಸಂಸ್ಥೆಗೆ ಕಳುಹಿಸಲಾಗುವುದು ಎಂದು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. ಬಿಎಂಟಿಸಿ ಹಾಗೂ ಕೆಎಸ್ಆರ್‌ಟಿಸಿ ಬಸ್ ಚಾಲಕರು ನಿರ್ಲಕ್ಷ್ಯ ಚಾಲನೆ ಮಾಡುತ್ತಾರೆ. ನಿಷೇಧಿತ ಪ್ರದೇಶದಲ್ಲಿ ಕರ್ಕಶ ಶಬ್ದ ಮಾಡುವುದು, ಸಂಚಾರ ನಿಯಮ ಉಲ್ಲಂಘನೆ ಮಾಡಿ ಚಾಲನೆ ಮಡುವುದರಲ್ಲೂ ಮುಂದಿವೆ. ಬೆಂಗಳೂರಿನ ಬಹುತೇಕ ಸಿಗ್ನಲ್‌ಗಳಲ್ಲಿ ಸಂಚಾರ ಪೊಲೀಸರು ಸ್ವಯಂ ಚಾಲಿತ ಕ್ಯಾಮರಾಗಳನ್ನು ಅಳವಡಿಸಿದ್ದಾರೆ. ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಸ್ವಯಂ ಚಾಲಿತ ಕ್ಯಾಮರಾಗಳು ಸಾಕ್ಷಿ ಸಮೇತ ಸೆರೆ ಹಿಡಿಯುತ್ತವೆ. ಇದನ್ನು ಆಧರಿಸಿ ಸಂಚಾರ ಪೊಲೀಸರು ದಂಡವನ್ನು ವಿಧಿಸುತ್ತಾರೆ. ಇದರ ಜತೆಗೆ ಸಿಗ್ನಲ್ ಗಳಲ್ಲಿಕಾರ್ಯ ನಿರ್ವಹಿಸುವ ಸಂಚಾರ ಪೊಲೀಸರು ನಿಯಮ ಉಲ್ಲಂಘನೆ ಬಗ್ಗೆ ಮೊಬೈಲ್‌ನಲ್ಲಿ ಚಿತ್ರ ತೆಗೆದುಕೊಂಡು ಕೇಸು ದಾಖಲಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಹೀಗಾಗಿ ನಿಯಮ ಉಲ್ಲಂಘನೆ ಮಾಡುವ ವಾಹನಗಳ ವಿರುದ್ಧ ಸದ್ದಿಲ್ಲದೇ ಕೇಸುಗಳು ಬೀಳುತ್ತಿವೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…