Featured

KSRTC ಬಸ್ ಪ್ರಯಾಣದ ವೇಳೆ ಪ್ರಯಾಣಿಕರು ಮೊಬೈಲ್ ಬಳಸಿ ಜೋರಾಗಿ ಮಾತನಾಡುವಂತಿಲ್ಲ , ಜೋರಾಗಿ ಹಾಡು ಹಾಕುವಂತಿಲ್ಲ : ಹೊಸ ನಿಯಮ  ಜಾರಿಗೆ  – Vishwanews24

KSRTC ಬಸ್ ಪ್ರಯಾಣದ ವೇಳೆ ಪ್ರಯಾಣಿಕರು ಮೊಬೈಲ್ ಬಳಸಿ ಜೋರಾಗಿ ಮಾತನಾಡುವಂತಿಲ್ಲ , ಜೋರಾಗಿ ಹಾಡು ಹಾಕುವಂತಿಲ್ಲ : ಹೊಸ ನಿಯಮ  ಜಾರಿಗೆ  – Vishwanews24

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಮೊಬೈಲ್ ಫೋನ್ ಸ್ಪೀಕರ್‌ಗಳಲ್ಲಿ ಜೋರಾಗಿ ಹಾಡುಗಳನ್ನು ಪ್ಲೇ ಮಾಡುವುದನ್ನು ನಿಷೇಧಿಸಲಾಗಿದೆ.

ಸರ್ಕಾರಿ ಬಸ್ ಪ್ರಯಾಣದ ವೇಳೆ ಮೊಬೈಲ್ ಫೋನ್ ಬಳಿಸಿ ಪ್ರಯಾಣಿಕರು ಮಾತನಾಡುವುದನ್ನು ನಿಷೇಧಿಸಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಆದೇಶ ಹೊರಡಿಸಿದ್ದಾರೆ.

ಪ್ರಯಾಣದ ವೇಳೆ ಹಾಡು, ಸಿನಿಮಾ ಮುಂತಾದವುಗಳನ್ನು ಜೋರಾಗಿ ಹಾಕುವಂತಿಲ್ಲ. ಒಂದು ವೇಳೆ ಹಾಕಿದರೆ ಮೊದಲು ಬಸ್ ನಿರ್ವಾಹಕ ಪ್ರಯಾಣಕನಲ್ಲಿ ಮನವಿ ಮಾಡಿಕೊಳ್ಳಬೇಕು. ಮನವಿ ಕಡೆಗಣಿಸಿದರೆ ಬಸ್ ಅರ್ಧಕ್ಕೆ ನಿಲ್ಲಿಸಿ ಪ್ರಯಾಣಿಕರನ್ನು ಅಲ್ಲೇ ಇಳಿಸಿ ಮುಂದುವರೆಯ ಬೇಕು.

ಈ ಬಗ್ಗೆ ಏನಾದರು ಸಮಸ್ಯೆಗಳು ಎದುರಾದರೆ ತಕ್ಷಣವೇ ಸ್ಥಳೀಯ ಪೊಲೀಸ್ ಠಾಣೆಗೆ ವಿಷಯ ತಿಳಿಸಬೇಕು. ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ 1989ರ ನಿಯಮ 94(1)V ಪ್ರಕಾರ ಇದು ಕಾನೂನು ಬಾಹಿರವಾಗಿರುವುದರಿಂದ ಬಸ್‌ಗಳಲ್ಲಿ ಜೋರಾಗಿ ಶಬ್ದ ಉಂಟು ಮಾಡಿ ಮೊಬೈಲ್ ಬಳಸುವುದಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದರಿಂದ ಶಬ್ದಮಾಲಿನ್ಯ ಉಂಟಾಗುವದರ ಜೊತೆ ಪ್ರಯಾಣಿಕರಿಗೂ ಕಿರಿಕಿರಿ ಉಂಟಾಗುತ್ತಿರುವ ಬಗ್ಗೆ ಹಲವು ದೂರಗಳ ಹಿನ್ನೆಲೆ, ಕೆಎಸ್ಆರ್ಟಿಸಿ ಈ ಬಗ್ಗೆ ಸುತ್ತೋಲೆ ಹೊರಡಿಸಿ ಆದೇಶಿಸಿದೆ.

ಬಸ್ ಡ್ರೈವರ್‌ಗಳಿಂದ ಸ್ಥಳದಲ್ಲಿಯೇ ದಂಡ ವಸೂಲಿ ಮಾಡಲು ಪೊಲೀಸರು ಮುಂದಾಗುತ್ತಾರೆ ಆದರೆ ಆ ಸಮಯದಲ್ಲಿ ಟ್ರಾಫಿಕ್ ಜಾಮ್ ಉಂಟಾಗಬಹುದು ಅಥವಾ ಚಾಲಕರ ಬಳಿ ದುಡ್ಡು ಇಲ್ಲದೆ ಇರಬಹುದು. ಹೀಗಾಗಿ, ನೇರವಾಗಿ ಸಂಸ್ಥೆಗೆ ಕಳುಹಿಸಲಾಗುವುದು ಎಂದು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. ಬಿಎಂಟಿಸಿ ಹಾಗೂ ಕೆಎಸ್ಆರ್‌ಟಿಸಿ ಬಸ್ ಚಾಲಕರು ನಿರ್ಲಕ್ಷ್ಯ ಚಾಲನೆ ಮಾಡುತ್ತಾರೆ. ನಿಷೇಧಿತ ಪ್ರದೇಶದಲ್ಲಿ ಕರ್ಕಶ ಶಬ್ದ ಮಾಡುವುದು, ಸಂಚಾರ ನಿಯಮ ಉಲ್ಲಂಘನೆ ಮಾಡಿ ಚಾಲನೆ ಮಡುವುದರಲ್ಲೂ ಮುಂದಿವೆ. ಬೆಂಗಳೂರಿನ ಬಹುತೇಕ ಸಿಗ್ನಲ್‌ಗಳಲ್ಲಿ ಸಂಚಾರ ಪೊಲೀಸರು ಸ್ವಯಂ ಚಾಲಿತ ಕ್ಯಾಮರಾಗಳನ್ನು ಅಳವಡಿಸಿದ್ದಾರೆ. ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಸ್ವಯಂ ಚಾಲಿತ ಕ್ಯಾಮರಾಗಳು ಸಾಕ್ಷಿ ಸಮೇತ ಸೆರೆ ಹಿಡಿಯುತ್ತವೆ. ಇದನ್ನು ಆಧರಿಸಿ ಸಂಚಾರ ಪೊಲೀಸರು ದಂಡವನ್ನು ವಿಧಿಸುತ್ತಾರೆ. ಇದರ ಜತೆಗೆ ಸಿಗ್ನಲ್ ಗಳಲ್ಲಿಕಾರ್ಯ ನಿರ್ವಹಿಸುವ ಸಂಚಾರ ಪೊಲೀಸರು ನಿಯಮ ಉಲ್ಲಂಘನೆ ಬಗ್ಗೆ ಮೊಬೈಲ್‌ನಲ್ಲಿ ಚಿತ್ರ ತೆಗೆದುಕೊಂಡು ಕೇಸು ದಾಖಲಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಹೀಗಾಗಿ ನಿಯಮ ಉಲ್ಲಂಘನೆ ಮಾಡುವ ವಾಹನಗಳ ವಿರುದ್ಧ ಸದ್ದಿಲ್ಲದೇ ಕೇಸುಗಳು ಬೀಳುತ್ತಿವೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago