Featured

Maharashtra Election Results: ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿ  – vishwanews24

Maharashtra Election Results: ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿ

ನವದೆಹಲಿ: ಮಹಾರಾಷ್ಟ್ರ ಮತ್ತು ಜಾರ್ಖಂಡ್ ಜೊತೆಗೆ 14 ರಾಜ್ಯಗಳ 48 ವಿಧಾನಸಭಾ ಮತ್ತು 2 ಲೋಕಸಭಾ ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಬೆಳಗ್ಗೆ ಎಂಟು ಗಂಟೆಗೆ ಆರಂಭಗೊಂಡಿದೆ.ಮಹಾರಾಷ್ಟ್ರದ 288 ಅಸೆಂಬ್ಲಿ ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಆರಂಭಿಕ ಹಂತದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮತ್ತು ಕಾಂಗ್ರೆಸ್ ನೇತೃತ್ವದ ಮಹಾವಿಕಾಸ್ ಅಘಾಡಿ ನಡುವೆ ಪ್ರಮುಖ ಸ್ಪರ್ಧೆ ಏರ್ಪಟ್ಟಿತ್ತು.

ಆದರೆ ಇದೀಗ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದು, ಬೆಳಗ್ಗೆಯೇ ಮ್ಯಾಜಿಕ್ ನಂಬರ್ ದಾಟಿ ಮುನ್ನಡೆ ಕಾಯ್ದುಕೊಂಡಿದೆ.

ಮಹಾರಾಷ್ಟ್ರ ವಿಧಾನಸಭೆಯ 288 ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತಗಳ ಎಣಿಕೆಯಲ್ಲಿ ಬೆಳಗ್ಗೆ 9:50ರ ಸುಮಾರಿಗೆ ಬಿಜೆಪಿ ನೇತೃತ್ವದ ಮಹಾಯುತಿ 150 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ ನೇತೃತ್ವದ ಮಹಾವಿಕಾಸ್ ಅಘಾಡಿ 120 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ ಇತರರು 7 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇದು ಬೆಳಗಿನ ಟ್ರೆಂಡ್ ಆದರೂ ಸಹ ಮುಂದಿನ ಹಂತಗಳಲ್ಲಿ ಈ ನಂಬರ್‌ಗಳಲ್ಲಿ ಏರಿಳಿತ ಆಗುವ ಸಾಧ್ಯತೆ ಇದೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

13 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

15 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

15 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

15 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

16 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

16 hours ago