Featured

Mangaluru: ಅಡ್ಯಾರ್‌ ಬೊಂಡ ಫ್ಯಾಕ್ಟರಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ : ಪ್ರಯೋಗಾಲಯ ಪರೀಕ್ಷಾ ವರದಿ ಬಹಿರಂಗ – Vishwanews24

Mangaluru: ಅಡ್ಯಾರ್‌ ಬೊಂಡ ಫ್ಯಾಕ್ಟರಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ : ಪ್ರಯೋಗಾಲಯ ಪರೀಕ್ಷಾ ವರದಿ ಬಹಿರಂಗ

ಮಂಗಳೂರು  :ಇತ್ತೀಚೆಗೆ ಅಡ್ಯಾರ್ ನಲ್ಲಿರುವ ಬೊಂಡಾ ಪ್ಯಾಕ್ಟರಿಯಲ್ಲಿ ಎಳ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಯೋಗಾಲಯ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈ ಸೇರಿದ್ದು, ಸಹಜವಾಗಿತ್ತು ಎಳನೀರು ಎಂದು ವರದಿಯಲ್ಲಿ ತಿಳಿಸಲಾಗಿದೆ.

ನಗರದ ಹೊರವಲಯದ ಅಡ್ಯಾರಿನ ಬೊಂಡ ಫ್ಯಾಕ್ಟರಿಯಲ್ಲಿ ಎಪ್ರಿಲ್ 9ರಂದು ಖರೀದಿಸಿದ ಎಳನೀರು ಕುಡಿದವರಲ್ಲಿ 138 ಜನರು ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡಿದ್ದರು. ಈ ಪ್ರಕರಣ ಗಮನಕ್ಕೆ ಬಂದ ಬೆನ್ನಲ್ಲೇ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಹಾಗೂ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಫ್ಯಾಕ್ಟರಿಯನ್ನು ಬಂದ್ ಮಾಡಿಸಿ ಎಳನೀರು ಮಾದರಿ ಸಂಗ್ರಹಿಸಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು.

ಘಟನೆ ನಡೆದ ಎರಡು ದಿನಗಳ ನಂತರ ಇದು ಗಮನಕ್ಕೆ ಬಂದಿದ್ದು, ಆ ದಿನ ಫ್ಯಾಕ್ಟರಿಯಲ್ಲಿ ಸಂಗ್ರಹಿಸಿದ್ದ ಎಳನೀರನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪ್ರಯೋಗಾಲಯ ಪರೀಕ್ಷೆಯ ವರದಿ ಎಪ್ರಿಲ್ 22ರಂದು ಆರೋಗ್ಯ ಇಲಾಖೆಯ ಕೈ ಸೇರಿದೆ.

ಅಸ್ವಸ್ಥಗೊಂಡವರ ಮಲ ಮತ್ತು ರಕ್ತದ ಮಾದರಿ ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವರದಿ ಪ್ರಕಾರ ಕೆಲವರ ದೇಹದಲ್ಲಿ ಇಕೊಲೈ ಬ್ಯಾಕ್ಟಿರಿಯಾ ಇರುವುದು ಪತ್ತೆಯಾಗಿದೆ. ಮನುಷ್ಯನ ಕರುಳಿನಲ್ಲಿ ಈ ಬ್ಯಾಕ್ಟಿರಿಯಾ ಇರುತ್ತದೆ. ಆದರೆ ಅವುಗಳ ಪ್ರಮಾಣ ಹೆಚ್ಚಾದರೆ, ಕೆಲವೊಮ್ಮೆ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ತಿಳಿಸಿದರು.

ಅಡ್ಯಾರಿನಲ್ಲಿರುವ ಎಳನೀರು ಗಂಜಿಯಿಂದ ಐಸ್‌ಕ್ರೀಮ್ ತಯಾರಿಸುವ ಘಟಕ, ಕಾರ್‌ಸ್ಪೀಟ್ ಮತ್ತು ಕದ್ರಿಯಲ್ಲಿರುವ ಎಳನೀರು ಮಳಿಗೆಗಳನ್ನು ಬಂದ್ ಮಾಡಿಸಲಾಗಿದೆ. ಈಗಲೂ ಅವು ಬಂದ್ ಆಗಿಯೇ ಇವೆ. ಫ್ಯಾಕ್ಟರಿಯವರು ಸ್ವಯಂ ಪ್ರೇರಿತರಾಗಿ ಎಳನೀರು ನೀಡುವುದನ್ನು ನಿಲ್ಲಿಸಿದ್ದಾರೆ. ಅಡ್ಯಾರ್‌ನಲ್ಲಿ ಪಲ್ಟಿಂಗ್‌ ಘಟಕಗಳು ಮಾತ್ರ ಕಾರ್ಯಾಚರಿಸುತ್ತಿವೆ. ಗ್ರಾಹಕರಿಗೆ ಆಹಾರ ನೀಡುವಾಗ ನಿಯಮ ಪಾಲನೆ, ಶುಚಿತ್ವಕ್ಕೆ ಸಂಬಂಧಿಸಿ ಕೆಲವು ಅಂಶಗಳ ಕಟ್ಟುನಿಟ್ಟು ಪಾಲನೆಗೆ ಆಹಾರ ಸುರಕ್ಷಾ ಅಫಿದಾವಿತನ್ನು ಫ್ಯಾಕ್ಟರಿಯಿಂದ ಪಡೆಯಲು ಆಹಾರಸುರಕ್ಷಾ ಅಧಿಕಾರಿಗೆ ಸೂಚನೆ ನೀಡಲಾಗುವುದು ಎಂದು ಅವರು ಪ್ರತಿಕ್ರಿಯಿಸಿದರು.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

15 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

1 day ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

1 day ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

1 day ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago