Featured

MLA ಟಿಕೆಟ್ ವಂಚನೆ ಕೇಸ್ :  ಸೆ.23 ರವರೆಗೆ ಚೈತ್ರಾ ಕುಂದಾಪುರ ಸಿಸಿಬಿ ಕಸ್ಟಡಿಗೆ – Vishwanews24

MLA ಟಿಕೆಟ್ ವಂಚನೆ ಕೇಸ್ :  ಸೆ.23 ರವರೆಗೆ ಚೈತ್ರಾ ಕುಂದಾಪುರ ಸಿಸಿಬಿ ಕಸ್ಟಡಿಗೆ

ಬೆಂಗಳೂರು:ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರ ಬಳಿ 5 ಕೋಟಿ ರೂ. ಪಡೆದು ವಂಚನೆ ಕೇಸ್​ಗೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತೆ ಚೈತ್ರ ಕುಂದಾಪುರ, ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್ ಹಾಗೂ ಧನರಾಜ್‌ನನ್ನು ಸೆಪ್ಟೆಂಬರ್ 23ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್​ ಆದೇಶ ಹೊರಡಿಸಿದೆ.

ಸುಪ್ರೀಂ ಕೋರ್ಟ್, ಪ್ರಧಾನಿ ಕಚೇರಿ ಹಾಗೂ ಆರೆಸ್ಸೆಸ್ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಪಂಗನಾಮ ಹಾಕಿದ ಆರೋಪದಲ್ಲಿ ಹಿಂದೂ ಸಂಘಟನೆಯ ನಾಯಕಿ ಚೈತ್ರಾ ಕುಂದಾಪುರ, ಬಿಜೆಪಿ ನಾಯಕ ಗಗನ್ ಕಡೂರು ಗ್ಯಾಂಗನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದರು.

ನಕಲಿ ಆರೆಸ್ಸೆಸ್ ಪ್ರಚಾರಕರನ್ನು ಸೃಷ್ಟಿಸಿ ಬಿಜೆಪಿ ರಾಜ್ಯ ನಾಯಕರನ್ನೇ ವಂಚಿಸಿದ ಆರೋಪ ಚೈತ್ರಾ ಕುಂದಾಪುರ ಮೇಲಿದೆ. ತನ್ನ ವಾಕ್ಚಾತುರ್ಯ ಮೂಲಕ ಹಿಂದೂ ಕಾರ್ಯಕರ್ತರ ಮುಗ್ದತೆಯನ್ನು ಬಳಸಿ, ಬಿಜೆಪಿ ಟಿಕೆಟ್ ಕೊಡುವುದಾಗಿ ನಂಬಿಸಿದ್ದ ಚೈತ್ರಾ ಕುಂದಾಪುರ, ಬಿಜೆಪಿ ಯುವಮೋರ್ಚಾ ನಾಯಕ ಗಗನ್ ಕಡೂರು, ಉತ್ತರ ಕರ್ನಾಟಕದ ಹಾಲಶ್ರೀ ಸ್ವಾಮೀಜಿ ಸಹಿತ 7 ಮಂದಿಯ ವಿರುದ್ದ ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಜೆಪಿ ನಾಯಕರಾದ ಗೋವಿಂದ ಬಿ.ಪೂಜಾರಿ ಅವರು ಈ ದೂರು ನೀಡಿದ್ದರು. ಪ್ರಕರಣದ ಗಂಭೀರತೆ ಅರಿತ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು, ಈ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿದ್ದಾರೆ. ಕಳೆದೆರಡು ದಿನಗಳಿಂದ ಆರೋಪಿಗಳಿಗಾಗಿ ಬಲೆ ಬೀಸಿದ್ದ ಸಿಸಿಬಿ ಪೊಲೀಸರು ಮಂಗಳವಾರ ಗಗನ್ ಕಡೂರು ಅನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ 14 ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿದ್ದರು.

ಈ ಮಧ್ಯೆ ರಾತ್ರಿ ಚೈತ್ರಾ ಕುಂದಾಪುರ ಸಹಿತ ಮತ್ತೆ ಮೂವರನ್ನು ಸಿಸಿಬಿ ತಂಡ ಬಂದಿಸಿ ಬೆಂಗಳೂರಿಗೆ ಕರೆತಂದಿದೆ. ಈ ಮೂಲಕ ಸುಪ್ರೀಂ ಕೋರ್ಟ್, ಪ್ರಧಾನಿ ಕಚೇರಿ ಹೆಸರಿನಲ್ಲಿ ವಂಚನೆಗೆ ತೊಡಗಿದ್ದಂತ ಚೈತ್ರಾ ಕುಂದಾಪುರ ಅಂಡ್ ಗ್ಯಾಂಗ್ ಅಂದರ್ ಆದಂತೆ ಆಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago