ಬೆಂಗಳೂರು:ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರ ಬಳಿ 5 ಕೋಟಿ ರೂ. ಪಡೆದು ವಂಚನೆ ಕೇಸ್ಗೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತೆ ಚೈತ್ರ ಕುಂದಾಪುರ, ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್ ಹಾಗೂ ಧನರಾಜ್‌ನನ್ನು ಸೆಪ್ಟೆಂಬರ್ 23ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.
ಸುಪ್ರೀಂ ಕೋರ್ಟ್, ಪ್ರಧಾನಿ ಕಚೇರಿ ಹಾಗೂ ಆರೆಸ್ಸೆಸ್ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಪಂಗನಾಮ ಹಾಕಿದ ಆರೋಪದಲ್ಲಿ ಹಿಂದೂ ಸಂಘಟನೆಯ ನಾಯಕಿ ಚೈತ್ರಾ ಕುಂದಾಪುರ, ಬಿಜೆಪಿ ನಾಯಕ ಗಗನ್ ಕಡೂರು ಗ್ಯಾಂಗನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದರು.
ನಕಲಿ ಆರೆಸ್ಸೆಸ್ ಪ್ರಚಾರಕರನ್ನು ಸೃಷ್ಟಿಸಿ ಬಿಜೆಪಿ ರಾಜ್ಯ ನಾಯಕರನ್ನೇ ವಂಚಿಸಿದ ಆರೋಪ ಚೈತ್ರಾ ಕುಂದಾಪುರ ಮೇಲಿದೆ. ತನ್ನ ವಾಕ್ಚಾತುರ್ಯ ಮೂಲಕ ಹಿಂದೂ ಕಾರ್ಯಕರ್ತರ ಮುಗ್ದತೆಯನ್ನು ಬಳಸಿ, ಬಿಜೆಪಿ ಟಿಕೆಟ್ ಕೊಡುವುದಾಗಿ ನಂಬಿಸಿದ್ದ ಚೈತ್ರಾ ಕುಂದಾಪುರ, ಬಿಜೆಪಿ ಯುವಮೋರ್ಚಾ ನಾಯಕ ಗಗನ್ ಕಡೂರು, ಉತ್ತರ ಕರ್ನಾಟಕದ ಹಾಲಶ್ರೀ ಸ್ವಾಮೀಜಿ ಸಹಿತ 7 ಮಂದಿಯ ವಿರುದ್ದ ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ನಾಯಕರಾದ ಗೋವಿಂದ ಬಿ.ಪೂಜಾರಿ ಅವರು ಈ ದೂರು ನೀಡಿದ್ದರು. ಪ್ರಕರಣದ ಗಂಭೀರತೆ ಅರಿತ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು, ಈ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿದ್ದಾರೆ. ಕಳೆದೆರಡು ದಿನಗಳಿಂದ ಆರೋಪಿಗಳಿಗಾಗಿ ಬಲೆ ಬೀಸಿದ್ದ ಸಿಸಿಬಿ ಪೊಲೀಸರು ಮಂಗಳವಾರ ಗಗನ್ ಕಡೂರು ಅನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ 14 ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿದ್ದರು.
ಈ ಮಧ್ಯೆ ರಾತ್ರಿ ಚೈತ್ರಾ ಕುಂದಾಪುರ ಸಹಿತ ಮತ್ತೆ ಮೂವರನ್ನು ಸಿಸಿಬಿ ತಂಡ ಬಂದಿಸಿ ಬೆಂಗಳೂರಿಗೆ ಕರೆತಂದಿದೆ. ಈ ಮೂಲಕ ಸುಪ್ರೀಂ ಕೋರ್ಟ್, ಪ್ರಧಾನಿ ಕಚೇರಿ ಹೆಸರಿನಲ್ಲಿ ವಂಚನೆಗೆ ತೊಡಗಿದ್ದಂತ ಚೈತ್ರಾ ಕುಂದಾಪುರ ಅಂಡ್ ಗ್ಯಾಂಗ್ ಅಂದರ್ ಆದಂತೆ ಆಗಿದೆ.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…