Featured

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ

ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ : ಪೊಲೀಸ್ ಕಮಿಷನರ್

ಮಂಗಳೂರು : ಮಂಗಳೂರು ರಿಫೈನರಿ ಆಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭಾರೀ ಸ್ಫೋಟದಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಇಂದು ಮಧ್ಯಾಹ್ನ 12:15ರ ಸುಮಾರಿಗೆ MRPLನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕ (CHTU) ಘಟಕದಲ್ಲಿ ಭಾರಿ ಸ್ಫೋಟದ ನಂತರ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಘಟಕದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಈ ಪೈಕಿ ರಾಜೇಶ್ ಬ್ಯಾಪ್ಟಿಸ್ಟ್ ಎಂಬುವರಿಗೆ 35 ಶೇ. ಸುಟ್ಟ ಗಾಯಗಳಾಗಿವೆ. ಅವರನ್ನು ಚಿಕಿತ್ಸೆಗಾಗಿ ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಪ್ರಕಾರ ಅವರು ಅಪಾಯದಿಂದ ಪಾರಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದವರು ತಿಳಿಸಿದ್ದಾರೆ.

ಸ್ಫೋಟ ಸಂಭವಿಸಿದ ಘಟಕದ ಪಕ್ಕದ ಕಚೇರಿಯಲ್ಲಿದ್ದ ಆರು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸದ್ಯ ಬೆಂಕಿಯನ್ನು ನಿಯಂತ್ರಿಸಲಾಗಿದೆ. ನಾವು ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಓ ನರ್ವಡೆ ವಿನಾಯಕ್ ಕಾರ್ಭಾರಿ ಭೇಟಿ ನೀಡಿದ್ದಾರೆ.

Vishwa News 24

Recent Posts

ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ -vishwanews24

ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ ವಿದೇಶಿ ಕಂಪೆನಿ ಸೇರಿದಂತೆ ಹತ್ತಾರು ಸಂಸ್ಥೆಗಳ ಭಾಗಹಿಸುವಿಕೆ ಕಾಪು: ಯುವಜನತೆಗೆ ಉದ್ಯೋಗಾವಕಾಶ…

17 hours ago

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ -vishwanews24

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ ನವದೆಹಲಿ: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪದಾಧಿಕಾರಿಗಳನ್ನು…

2 days ago

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ – vishwanews24

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ ಇತಿಹಾಸ ಪ್ರಸಿದ್ಧ ಕಾಪು ಹಳೆ…

5 days ago

ಸಂಬಂಧಿಕರನ್ನು ಬೀಳ್ಕೊಡಲು ಬಂದ 12 ಮಂದಿ ವಂದೇ ಭಾರತ್‌ ರೈಲಲ್ಲಿ ಲಾಕ್‌ ; 36 ಸಾವಿರ ದಂಡ – vishwanews24

ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರವೇಶಿಸಿದ 12 ಮಂದಿ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿದ್ದರಿಂದ ರೈಲಿನೊಳಗೆ ಲಾಕ್ 140 ಕಿ.ಮೀ…

5 days ago

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹ 20ರವರೆಗೆ ಕಡಿತ – vishwanews24

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…

5 days ago

ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು -vishwanews24

ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು ನವದೆಹಲಿ: ಸೌದಿ ಅರೇಬಿಯಾದಲ್ಲಿನ ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಂಡಿಗೋ…

5 days ago