ONLINE GAME : ಕರ್ನಾಟಕದಲ್ಲಿ ಆನ್‌ಲೈನ್ ಗೇಮಿಂಗ್ಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್ – Vishwanews24
ONLINE GAME ಗೆ ಮತ್ತೆ ‘ಗ್ರೀನ್ ಸಿಗ್ನಲ್’: ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ನಿಷೇಧಿಸಿ ಹೊರಡಿಸಿದ್ದ ಸರ್ಕಾರದ ಆದೇಶ ರದ್ದು ಮಾಡಿದ ಹೈಕೋರ್ಟ್ – Vishwanews24
ಬೆಂಗಳೂರು: ಆನ್‌ಲೈನ್ ಜೂಜಾಟವನ್ನು ನಿಷೇಧಿಸುವ ಕಾನೂನು ಮಾಡಿದ್ದ ರಾಜ್ಯಸರ್ಕಾರದ ಆದೇಶವನ್ನು ಪ್ರಶ್ನಿಸಿ ಗೇಮಿಂಗ್ ಕಂಪನಿಗಳು ಸಲ್ಲಿಸಿದ್ದ ಅರ್ಜಿ ಹೈಕೋರ್ಟ್‌ನಲ್ಲಿ ಮಾನ್ಯವಾಗಿದೆ.
ಆನ್‌ಲೈನ್ ಜೂಜು ಹಾಗೂ ಬೆಟ್ಟಿಂಗ್ ನಿಷೇಧಿಸುವ ಸಂಬಂಧ ಕರ್ನಾಟಕ ಪೊಲೀಸ್ ಕಾಯ್ದೆ ತಿದ್ದುಪಡಿಗೆ 2021ರಲ್ಲಿ ಅನುಮೋದನೆಯನ್ನು ನೀಡಲಾಗಿತ್ತು.
ಕಾಯ್ದೆಯಲ್ಲಿ ಹಣವನ್ನು ಪಣವಾಗಿ ಕಟ್ಟುವ ಆನ್‌ಲೈನ್ ಗೇಮ್ ಸೇರಿದಂತೆ ಎಲ್ಲಾ ಜೂಜಾಟವನ್ನು ಜಾಮೀನು ರಹಿತ ಅಪರಾಧ ಎಂದು ಪರಿಗಣಿಸುವ ಕರ್ನಾಟಕದ ಪೊಲೀಸ್ ಕಾಯ್ದೆ ತಿದ್ದುಪಡಿ ವಿಧೇಯಕವನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ವಿಧಾನಸಭೆಯಲ್ಲಿ ಮಂಡನೆ ಮಾಡಿದ್ದರು. ಈ ಕಾಯ್ದೆಯು ಎರಡು ಸದನದಲ್ಲಿ ಬಹುಮತದೊಂದಿಗೆ ಅನುಮೋದನೆಯನ್ನು ಪಡೆದುಕೊಂಡಿತ್ತು. ಈ ನಡುವೆ ರಾಜ್ಯದಲ್ಲಿ ಆನ್‌ಲೈನ್ ಗೇಮಿಂಗ್ ಬ್ಯಾನ್ ಹಿನ್ನೆಲೆಯಲ್ಲಿ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹಲವು ಕಂಪನಿಗಳು ರಿಟ್ ಸಲ್ಲಿಸಿದ್ದವು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠದಿಂದ ಸರ್ಕಾರದ ಆದೇಶವನ್ನು ರದ್ದು ಮಾಡಿದೆ. ಈ ಮೂಲಕ ಮತ್ತೆ ರಾಜ್ಯದಲ್ಲಿ ಆನ್‌ಲೈನ್ ಗೇಮಿಂಗ್ ಕಾಣಬಹುದಾಗಿದೆ. ನ್ಯಾಯಮೂರ್ತಿ ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ರ ಪೀಠ ಆನ್‌ಲೈನ್ ಗೇಮ್ಗೆ ಗ್ರೀನ್ ಸಿಗ್ನಲ್ ನೀಡಿದೆ.
ಇದನ್ನೂ ಓದಿ :
ಇಸ್ರೋದ 2022ರ ಮೊದಲ ಯಶಸ್ವಿ ಉಡಾವಣೆ : 3 ಉಪಗ್ರಹಗಳನ್ನು ಹೊತ್ತು ಸಾಗಿದ PSLV-C52
