Featured

PFI ನಿಷೇಧ – ಇದು ಸಂವಿಧಾನದ ಮೂಲಭೂತ ಹಕ್ಕುಗಳ ಉಲ್ಲಂಘನೆ; ವಾಕ್‌ ಸ್ವಾತಂತ್ರ್ಯ ಪ್ರತಿಭಟನೆ ಮತ್ತು ಸಂಘಟನೆಯನ್ನು ಕ್ರೂರವಾಗಿ ಹತ್ತಿಕ್ಕಲಾಗುತ್ತಿದೆ : SDPI – Vishwanews24

PFI ನಿಷೇಧ – ಇದು ಸಂವಿಧಾನದ ಮೂಲಭೂತ ಹಕ್ಕುಗಳ ಉಲ್ಲಂಘನೆ; ವಾಕ್‌ ಸ್ವಾತಂತ್ರ್ಯ ಪ್ರತಿಭಟನೆ ಮತ್ತು ಸಂಘಟನೆಯನ್ನು ಕ್ರೂರವಾಗಿ ಹತ್ತಿಕ್ಕಲಾಗುತ್ತಿದೆ : SDPI

ಬೆಂಗಳೂರು: ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಮತ್ತು ಅದರ ಸಹ ವರ್ತಿ ಸಂಘಟನೆಗಳನ್ನು ಐದು ವರ್ಷ ಅವಧಿಗೆ ಕೇಂದ್ರ ಸರ್ಕಾರ ನಿಷೇಧಿಸಲಾಗಿದೆ. PFI ಮೇಲೆ ನಿಷೇಧ ಹೇರಿರುವ ಒಕ್ಕೂಟ ಸರ್ಕಾರದ ನಿರ್ಧಾರ ದೇಶದ ಸಂವಿಧಾನ ಪ್ರಜೆಗಳಿಗೆ ಖಾತರಿ ಪಡಿಸಿರುವ ಹಕ್ಕುಗಳಿಗೆ ನೀಡಿರುವ ಬಲವಾದ ಪೆಟ್ಟು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ  ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ. ಫೈಝಿ ಕಿಡಿಕಾರಿದ್ದಾರೆ.

ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಮತ್ತು ಆಡಳಿತದ ವಿರುದ್ಧ ಯಾರೇ ಧ್ವನಿಯೆತ್ತಿದರೂ ಸಹ ಅವರ ವಿರುದ್ಧ ತನಿಖಾ ಸಂಸ್ಥೆಗಳಿಂದ ದಾಳಿ ಮಾಡಿಸಿ ಅವರನ್ನು ಬಂಧಿಸಲಾಗುತ್ತಿದೆ. ವಾಕ್‌ ಸ್ವಾತಂತ್ರ್ಯ ಪ್ರತಿಭಟನೆ ಮತ್ತು ಸಂಘಟನೆಯನ್ನು ಕ್ರೂರವಾಗಿ ಹತ್ತಿಕ್ಕಲಾಗುತ್ತಿದೆ.

ಇದು ಸಂವಿಧಾನದ ಮೂಲಭೂತ ಹಕ್ಕುಗಳ ಉಲ್ಲಂಘನೆ. ಈ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿರೋಧ ಪಕ್ಷಗಳನ್ನು ಬೆದರಿಸುವ ಮತ್ತು ಪ್ರತಿರೋಧದ ಧ್ವನಿಯನ್ನು ಅಡಗಿಸುವ ಕೆಲಸ ಮಾಡುತ್ತಿದೆ. ಇದು ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ ಎಂದು ಸ್ಪಷ್ಟವಾಗಿ ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿರುವ ಆರೆಸ್ಸೆಸ್ ವಿರುದ್ಧವೂ ಕ್ರಮ ಕೈಗೊಳ್ಳಬೇಕು: ಸಿದ್ದರಾಮಯ್ಯ ಆಗ್ರಹ – Vishwanews24

Vishwa News 24

Recent Posts

ಕಾಪು ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ -vishwanews24

ಕಾಪು ಬೀಚ್‌ನಲ್ಲಿ ಸಮುದ್ರದ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ.. ಉಡುಪಿ: ಕಾಪು ಬೀಚ್‌ನಲ್ಲಿ…

2 days ago

ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ -vishwanews24

ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ ವಿದೇಶಿ ಕಂಪೆನಿ ಸೇರಿದಂತೆ ಹತ್ತಾರು ಸಂಸ್ಥೆಗಳ ಭಾಗಹಿಸುವಿಕೆ ಕಾಪು: ಯುವಜನತೆಗೆ ಉದ್ಯೋಗಾವಕಾಶ…

2 days ago

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ -vishwanews24

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ ನವದೆಹಲಿ: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪದಾಧಿಕಾರಿಗಳನ್ನು…

4 days ago

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ – vishwanews24

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ ಇತಿಹಾಸ ಪ್ರಸಿದ್ಧ ಕಾಪು ಹಳೆ…

6 days ago

ಸಂಬಂಧಿಕರನ್ನು ಬೀಳ್ಕೊಡಲು ಬಂದ 12 ಮಂದಿ ವಂದೇ ಭಾರತ್‌ ರೈಲಲ್ಲಿ ಲಾಕ್‌ ; 36 ಸಾವಿರ ದಂಡ – vishwanews24

ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರವೇಶಿಸಿದ 12 ಮಂದಿ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿದ್ದರಿಂದ ರೈಲಿನೊಳಗೆ ಲಾಕ್ 140 ಕಿ.ಮೀ…

6 days ago

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹ 20ರವರೆಗೆ ಕಡಿತ – vishwanews24

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…

6 days ago