ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಸಹ ವರ್ತಿ ಸಂಘಟನೆಗಳನ್ನು ಐದು ವರ್ಷ ಅವಧಿಗೆ ಕೇಂದ್ರ ಸರ್ಕಾರ ನಿಷೇಧಿಸಲಾಗಿದೆ. PFI ಮೇಲೆ ನಿಷೇಧ ಹೇರಿರುವ ಒಕ್ಕೂಟ ಸರ್ಕಾರದ ನಿರ್ಧಾರ ದೇಶದ ಸಂವಿಧಾನ ಪ್ರಜೆಗಳಿಗೆ ಖಾತರಿ ಪಡಿಸಿರುವ ಹಕ್ಕುಗಳಿಗೆ ನೀಡಿರುವ ಬಲವಾದ ಪೆಟ್ಟು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ. ಫೈಝಿ ಕಿಡಿಕಾರಿದ್ದಾರೆ.
ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಮತ್ತು ಆಡಳಿತದ ವಿರುದ್ಧ ಯಾರೇ ಧ್ವನಿಯೆತ್ತಿದರೂ ಸಹ ಅವರ ವಿರುದ್ಧ ತನಿಖಾ ಸಂಸ್ಥೆಗಳಿಂದ ದಾಳಿ ಮಾಡಿಸಿ ಅವರನ್ನು ಬಂಧಿಸಲಾಗುತ್ತಿದೆ. ವಾಕ್ ಸ್ವಾತಂತ್ರ್ಯ ಪ್ರತಿಭಟನೆ ಮತ್ತು ಸಂಘಟನೆಯನ್ನು ಕ್ರೂರವಾಗಿ ಹತ್ತಿಕ್ಕಲಾಗುತ್ತಿದೆ.
ಇದು ಸಂವಿಧಾನದ ಮೂಲಭೂತ ಹಕ್ಕುಗಳ ಉಲ್ಲಂಘನೆ. ಈ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿರೋಧ ಪಕ್ಷಗಳನ್ನು ಬೆದರಿಸುವ ಮತ್ತು ಪ್ರತಿರೋಧದ ಧ್ವನಿಯನ್ನು ಅಡಗಿಸುವ ಕೆಲಸ ಮಾಡುತ್ತಿದೆ. ಇದು ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ ಎಂದು ಸ್ಪಷ್ಟವಾಗಿ ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…