Featured

PFI ನಿಷೇಧ : ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ – Vishwanews24

PFI ನಿಷೇಧ : ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್

ತಿರುವನಂತಪುರಂ: ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾವನ್ನು(PFI) ನಿಷೇಧ ಮಾಡಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್(IUML)ಸ್ವಾಗತಿಸಿದೆ.

ಪಿಎಫ್‌ಐ ಚಟುವಟಿಕೆಗಳನ್ನು ಖಂಡಿಸಿದ ಮುಸ್ಲಿಂ ಲೀಗ್‌ನ ಹಿರಿಯ ನಾಯಕ ಎಂ.ಕೆ.ಮುನೀರ್(MK Muneer), ಈ ಸಂಘಟನೆಯೂ ಕುರಾನ್ ಅನ್ನು ತಪ್ಪಾಗಿ ಅರ್ಥೈಸಿದೆ ಮತ್ತು ಹಿಂಸಾಚಾರದ ಮಾರ್ಗವನ್ನು ಅಳವಡಿಸಿಕೊಳ್ಳಲು ಸಮುದಾಯದವರನ್ನು ಮನವೊಲಿಸಿತ್ತು ಎಂದು ಹೇಳಿದರು.

ಕೋಝಿಕ್ಕೋಡ್‌ನಲ್ಲಿ ಪ್ರತಿಕ್ರಿಯಿಸಿದ ಅವರು, ಪಿಎಫ್‌ಐ ಯುವ ಪೀಳಿಗೆಯನ್ನು ದಾರಿತಪ್ಪಿಸಲು ಪ್ರಯತ್ನಿಸಿದ್ದು ಮಾತ್ರವಲ್ಲದೆ ಸಮಾಜದಲ್ಲಿ ಒಡಕು ಮತ್ತು ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸಿತ್ತು ಎಂದು ಕಿಡಿಕಾರಿದರು.

PFI ನಿಷೇಧ : ಬ್ಯಾನ್ ಮಾಡಿದ ತಕ್ಷಣ ಸಂಪೂರ್ಣ ಶಾಂತಿ ನೆಲಸುತ್ತೆ ಎಂದು ಹೇಳಲು ಸಾಧ್ಯವಿಲ್ಲ: ಎಚ್​ಡಿಕೆ – Vishwanews24

ರಾಜ್ಯದಲ್ಲಿರುವ ಎಲ್ಲಾ ಇಸ್ಲಾಮಿಕ್ ವಿದ್ವಾಂಸರು ಉಗ್ರಗಾಮಿ ಸಿದ್ಧಾಂತಗಳನ್ನು ಬಲವಾಗಿ ಖಂಡಿಸಿದ್ದಾರೆ. ಆದರೆ ಪಿಎಫ್‌ಐ ಸಣ್ಣ ಮಕ್ಕಳ ಬಾಯಲ್ಲೂ ಅವಹೇಳನಕಾರಿ ಘೋಷಣೆಗಳನ್ನು ಕೂಗುವಂತೆ ಮಾಡಿತ್ತು. ಯಾವ ಇಸ್ಲಾಂ ಅವರನ್ನು ಹಾಗೆ ಮಾಡಲು ಹೇಳಿದೆ ಎಂದು ಪ್ರಶ್ನಿಸಿದರು.

ಆರ್‌ಎಸ್‌ಎಸ್ ಮತ್ತು ಪಿಎಫ್‌ಐ-ಎಸ್‌ಡಿಪಿಐ ಎರಡರ ಕಾರ್ಯಗಳನ್ನು ಮುಸ್ಲಿಮ್‌ ಲೀಗ್‌ ಯಾವಾಗಲೂ ವಿರೋಧಿಸುತ್ತದೆ ಎಂದು ಹೇಳಿದ ಮುನೀರ್, ಆಯಾ ಸಮುದಾಯಗಳು ಅಂತಹ ಸಂಘಟನೆಗಳ ಕೋಮು ಸಿದ್ಧಾಂತಗಳನ್ನು ತಿರಸ್ಕರಿಸಬೇಕು ಎಂದು ಹೇಳಿದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

3 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

3 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

3 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

3 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

3 days ago