ಉಡುಪಿ: ‘ಕಾನೂನು ಬಾಹಿರ ಸಂಘಟನೆ ಬ್ಯಾನ್ ಮಾಡಿದ್ದರಿಂದ ನಮ್ಮ ಸಹೋದರ ಪ್ರವೀಣ್ ನೆಟ್ಟಾರು ಮತ್ತು ಹರ್ಷ ಹತ್ಯೆಗೆ ನ್ಯಾಯ ಸಿಕ್ಕಿದೆ. ಎನ್ ಐ ಎ ಕಾರ್ಯಾಚರಣೆಯಿಂದ ಫಲ ಸಿಕ್ಕಿದೆ ಎನ್ನುವುದು ನನ್ನ ಭಾವನೆ. ಇದಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಸಂಸದೆ ಶೋಭಾ ಕರಂದ್ಲಾಜೆ ಸತತ ಪ್ರಯತ್ನ ಪಟ್ಟಿದ್ದಾರೆ’ ಎಂದು ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ” ಹೇಳಿದ್ದಾರೆ.
“ಕಾನೂನು ಬಾಹಿರ ಚಟುವಟಿಕೆ ಮಾಡುವ ಸಂಘಟನೆಗಳನ್ನು ಬ್ಯಾನ್ ಮಾಡಲಾಗಿದೆ. ಪಿಎಫ್ಐ ದೇಶದ ಪರ, ಸಮಾಜದ ಉದ್ಧಾರಕ್ಕೆ ಎಂದೂ ಕೆಲಸ ಮಾಡಿಲ್ಲ. ಗಲಭೆ ಸೃಷ್ಟಿಸೋದೆ ಪಿಎಫ್ ಐ ಕೆಲಸ. ಎಸ್ ಡಿಪಿಐ ಒಂದು ರಾಜಕೀಯ ಪಕ್ಷ. ದೇಶವಿರೋಧಿ ಚಟುವಟಿಕೆಯಲ್ಲಿ ಎಸ್ ಡಿಪಿಐ ಶಾಮೀಲಾಗಿದ್ದರೆ ಕೇಂದ್ರ ಬ್ಯಾನ್ ಮಾಡಲಿದೆ” ಎಂದು ಹೇಳಿದ್ದಾರೆ.
ಉಡುಪಿಯಲ್ಲಿ ಆರಂಭವಾದ ಹಿಜಾಬ್ ಪ್ರಕರಣ ಕೂಡ PFI ನಿಷೇಧಕ್ಕೆ ಒಂದು ಕಾರಣ : ಶಾಸಕ ರಘುಪತಿ ಭಟ್ – Vishwanews24
ಇದೇ ವೇಳೆ ದೇಶಾದ್ಯಂತ ಕಾರ್ಯಾಚರಣೆ ಮಾಡಿದ ಎನ್ ಐಎ ಮತ್ತು ಎನ್ ಐ ಎ ಇಲಾಖೆಯ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.
ಮಾತಾಂಧ ಶಕ್ತಿಗಳನ್ನು ದೇಶದಲ್ಲಿ ನಿಷೇಧ ಮಾಡಲಾಗಿದೆ. ಕಠಿಣ ಕ್ರಮ ಮೋದಿ ಸರಕಾರದಿಂದ ಮಾತ್ರ ಸಾಧ್ಯ. ನವರಾತ್ರಿ ಸಂದರ್ಭ ದೇಶಕ್ಕೆ ಶುಭಸುದ್ದಿ ನೀಡಿದ್ದಾರೆ. ನವರಾತ್ರಿ ಸಂದರ್ಭ ದೇಶದ್ರೋಹಿಗಳನ್ನು ಮಟ್ಟ ಹಾಕುವ ನಿರ್ಧಾರ ಮಾಡಲಾಗಿದೆ. ಇದು ಇಡೀ ದೇಶದ ಜನ ಸಿಹಿ ಹಂಚುವ ಕ್ಷಣ, ಎನ್ ಐಎ ತನಿಖೆ ಸಂದರ್ಭ ಹಲವಾರು ವಿಚಾರ ಬೆಳಕಿಗೆ ಬಂದಿದೆ. ಹಿಜಾಬ್ ನ ಬೆನ್ನೆಲುಬು ಸಂಘಟನೆಯನ್ನು ಬ್ಯಾನ್ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಶಾಂತಿಯುತವಾಗಿರಲು ಎನ್ ಐಎ ಗೆ ಬೆಂಬಲಿಸುತ್ತೇವೆ. ಅಮಿತ್ ಶಾ ಸೂಕ್ತ ದಾಖಲೆಗಳನ್ನು ಪಡೆದು ಕ್ರಮ ಕೈಗೊಂಡಿದ್ದಾರೆ.
ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡುವ ಸಂಘಟನೆಗೆ ದೇಶದಲ್ಲಿ ಅವಕಾಶ ಇಲ್ಲ. ವಿದೇಶಿ ಹಣ ವರ್ಗಾವಣೆ, ಹಿಂಸೆ ವಿಚಾರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕಾಂಗ್ರೆಸ್ ಸರಕಾರ ಪಿಎಫ್ ಐ ಗೆ ಬೆಂಬಲವಾಗಿ ನಿಂತಿತ್ತು. ದುಷ್ಕೃತ್ಯ ದೇಶದ್ರೋಹಿ ಚಟುವಟಿಕೆಗೆ ಕಾಂಗ್ರೆಸ್ ಕಾರಣ. ಸಿದ್ದರಾಮಯ್ಯ ಸರಕಾರ 150 ಜನರ ಕೇಸು ವಾಪಾಸ್ ತೆಗೆದಿತ್ತು.
ಕರಾವಳಿ ಭಾಗ ಶಾಂತವಾಗಿರಲು ಇನ್ನು ಮುಂದೆಯೂ ಎನ್ ಎ ಏಜೆನ್ಸಿ ಗೆ ಸಹಕಾರ ನೀಡಲು ಬದ್ದರಿದ್ದವೆ ಎಂದು ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…