Former CM and JDS leader HD Kumarswamy addressing a press conference on the upcoming By Elections in Karnataka at JDS Office, in Bengaluru on Wednesday 13th November 2019 Pics: www.pics4news.com
ರಾಮನಗರ: ಕಾನೂನುಬಾಹಿರ ಚಟುವಟಿಕೆ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಪಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಹಾಗೂ ಅದರ ಅಂಗ ಸಂಸ್ಥೆಗಳು ಸೇರಿದಂತೆ 8 ಸಂಘಟನೆಗಳನ್ನು 5 ವರ್ಷಗಳವರೆಗೆ ನಿಷೇಧಿಸಿ ಕೇಂದ್ರ ಸರ್ಕಾರ ಇಂದು(ಸೆ.28) ಆದೇಶ ಹೊರಡಿಸಿದೆ.
ಈ ಕುರಿತು ಚನ್ನಪಟ್ಟಣದಲ್ಲಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಸಮಾಜಘಾತುಕ ಶಕ್ತಿಗಳನ್ನ ನಿಯಂತ್ರಿಸುವುದು ಸರ್ಕಾರದ ಕರ್ತವ್ಯ. ಆದರೆ, ಯಾವ ಯಾವ ಸಂಘಟನೆಗಳಿಂದ ದೇಶದ್ರೋಹದ ಕೆಲಸ ಆಗಿದೆ ಎಂಬುದನ್ನ ಜನರ ಮುಂದೆ ತೆರೆದಿಡಬೇಕು. ಇದು ಸರ್ಕಾರದ ಕರ್ತವ್ಯ ಎಂದರು.
PFI ನಿಷೇಧ :ಮುಂದೆ ಯಾರೂ ಇಂತಹ ವಿದ್ವಂಸಕ ಕೃತ್ಯಗಳಲ್ಲಿ ತೊಡಗಿಕೊಳ್ಳದಂತೆ ಒಂದು ಪಾಠವಾಗಬೇಕು..
ಬ್ಯಾನ್ ಮಾಡಿದ ತಕ್ಷಣ ಸಂಪೂರ್ಣ ಶಾಂತಿ ನೆಲಸುತ್ತೆ ಎಂದು ಹೇಳಲು ಸಾಧ್ಯವಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸೌಹಾರ್ದತೆ ಬೆಳೆಸುವ ಕೆಲಸವನ್ನು ಸರ್ಕಾರ ಮಾಡಬೇಕು. ಯಾವುದೇ ಸಂಘಟನೆಗಳು ಸಮಾಜಘಾತುಕ ಚಟುವಟಿಕೆಯಲ್ಲಿ ತೊಡಗಿದ್ರೆ ಕಠಿಣ ಕ್ರಮ ಆಗಬೇಕು. ಸಮಾಜಘಾತುಕ ಶಕ್ತಿಗಳನ್ನ ಕಂಟ್ರೋಲ್ನಲ್ಲಿಡುವುದು ಸರ್ಕಾರದ ಕರ್ತವ್ಯ ಎಂದ ಎಚ್ಡಿಕೆ, ಎನ್‌ಐಎ ದಾಳಿಯ ಸತ್ಯಾಂಶಗಳನ್ನು ಜನರ ಮುಂದೆ ಇಡಬೇಕು ಎಂದು ಆಗ್ರಹಿಸಿದರು.
ಯಾವ ಯಾವ ಸಂಘಟನೆಗಳಿಂದ ದೇಶದ್ರೋಹದ ಕೆಲಸ ಆಗಿದೆ ಎಂಬುದನ್ನ ಜನರಿಗೆ ಮಾಹಿತಿ ನೀಡಿ. ಯಾವ ರೀತಿ ಗಲಭೆ ಸೃಷ್ಟಿಗೆ ಪ್ರೋತ್ಸಾಹ ಕೊಡುತ್ತಿದ್ದಾರೆ ಎಂಬುದೂ ಗೊತ್ತಾಗಬೇಕು ಎಂದು ಎಚ್ಡಿಕೆ ಹೇಳಿದರು.
PFI ನಿಷೇಧ – ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಕರ್ನಾಟಕ ಕಾಂಗ್ರೆಸ್ – Vishwanews24
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…