PFI ನಿಷೇಧ – ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಕರ್ನಾಟಕ ಕಾಂಗ್ರೆಸ್ – Vishwanews24
PFI ನಿಷೇಧ – ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಕರ್ನಾಟಕ ಕಾಂಗ್ರೆಸ್
ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು(PFI) ನಿಷೇಧ ಮಾಡಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಕಾಂಗ್ರೆಸ್ ಸ್ವಾಗತಿಸಿದೆ.
ಕರ್ನಾಟಕ ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿ, ಸಂವಿಧಾನದ ಆಶಯಕ್ಕೆ ಹಾಗೂ ಭಾರತದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿರುವ ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷಗಳನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿಕೊಂಡೇ ಬಂದಿದೆ ಎಂದು ಹೇಳಿದೆ.
ಸಂವಿಧಾನದ ಆಶಯಕ್ಕೆ ಹಾಗೂ ಭಾರತದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿರುವ ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷಗಳನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿಕೊಂಡೇ ಬಂದಿದೆ.
PFI ಸೇರಿದಂತೆ ಸಮಾಜದಲ್ಲಿ ದ್ವೇಷ ಬಿತ್ತುವ, ಶಾಂತಿ, ಸಾಮರಸ್ಯ ಕದಡುವ ಯಾವುದೇ ಸಂಘಟನೆಗಳನ್ನು ನಿಷೇಧಿಸುವುದನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ.
— Karnataka Congress (@INCKarnataka) September 28, 2022
ಪಿಎಫ್ಐ ಸೇರಿದಂತೆ ಸಮಾಜದಲ್ಲಿ ದ್ವೇಷ ಬಿತ್ತುವ, ಶಾಂತಿ, ಸಾಮರಸ್ಯ ಕದಡುವ ಯಾವುದೇ ಸಂಘಟನೆಗಳನ್ನು ನಿಷೇಧಿಸುವುದನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ ಎಂದು ತಿಳಿಸಿದೆ.
