ಮಂಗಳೂರು: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇನ್ಫ್ರಾ ಸ್ಟ್ರಕ್ಚರ್ ಮಿಷನ್-PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಆ ಪೈಕಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮೋದನೆ ಲಭಿಸಿರುವುದಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ ಕಟ್ಟಡಕ್ಕೆ 1.11 ಕೋಟಿ :ಈ ಯೋಜನೆಯಡಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ ನ ಎರಡನೇ ಮಹಡಿಯಲ್ಲಿ ಜಿಲ್ಲಾ ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ (IPHL) ಕಟ್ಟಡ ನಿರ್ಮಾಣ ಮಾಡಲು 1.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಈಗಾಗಲೇ ಈ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಶೀಘ್ರದಲ್ಲೇ ಶಂಕುಸ್ಥಾಪನೆ ನೆರವೇರಿಸಿ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಕ್ಯಾ. ಚೌಟ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ ಮಟ್ಟದಲ್ಲಿ ದೊರೆಯುತ್ತಿರುವ ಆರೋಗ್ಯ ಸೇವೆಗೆ ಮತ್ತಷ್ಟು ಮೂಲಭೂತ ಸೌಲಭ್ಯಗಳನ್ನು ಒದಗಿಸುವ ದೃಷ್ಟಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಈ ಅನುದಾನವನ್ನು ಬಿಡುಗಡೆಗೊಳಿಸಿದೆ. ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ಕ್ಯಾ. ಚೌಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…