Featured

PSI ಅಕ್ರಮ ನೇಮಕಾತಿ ಪ್ರಕರಣ : ಹೈಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು : ಸಿದ್ದರಾಮಯ್ಯ ಆಗ್ರಹ – Vishwanews24

ಸಿಐಡಿ ತನಿಖೆಯಲ್ಲಿ ನಮಗೆ ಯಾವುದೇ ವಿಶ್ವಾಸವಿಲ್ಲ.

ಇದು 300 ಕೋಟಿ ರೂ.ಗಳ ಹಗರಣವಾಗಿದ್ದು, ಪಾರದರ್ಶಕ ತನಿಖೆಯಿಂದ ಮಾತ್ರ ಸತ್ಯ ಹೊರಬರಲು ಸಾಧ್ಯ ..

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣವನ್ನು ಹೈಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಐಡಿ ತನಿಖೆಯಲ್ಲಿ ನಮಗೆ ಯಾವುದೇ ವಿಶ್ವಾಸವಿಲ್ಲ. ಇದು 300 ಕೋಟಿ ರೂ.ಗಳ ಹಗರಣವಾಗಿದ್ದು, ಪಾರದರ್ಶಕ ತನಿಖೆಯಿಂದ ಮಾತ್ರ ಸತ್ಯ ಹೊರಬರಲು ಸಾಧ್ಯ. ಹೀಗಾಗಿ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ನ್ಯಾಯಾಂಗ ತನಿಖೆ ನಡೆಯುವುದು ಅಗತ್ಯ ಎಂದರು.

ಹಗರಣಕ್ಕೆ ಗೃಹ ಸಚಿವರು ಮತ್ತು ಸರ್ಕಾರವೇ ಹೊಣೆ. 5 ಮತ್ತು 10ನೇ ರ್‍ಯಾಂಕ್ ಪಡೆದ ದರ್ಶನ್ ಗೌಡ ಮತ್ತು ನಾಗೇಶ್ ಗೌಡ ಸಚಿವ ಅಶ್ವತ್ ನಾರಾಯಣ ಅವರ ಸಂಬಂಧಿಗಳಾಗಿದ್ದು, ಅವರನ್ನು ತನಿಖೆ ಮಾಡಿ ಬಿಡುಗಡೆಗೊಳಿಸಿರುವುದು ಅನುಮಾನ ಹೆಚ್ಚಲು ಕಾರಣವಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ನಾರಾಯಣ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು. ಆ ಮೂಲಕ ಪ್ರಾಮಾಣಿಕ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದವರು ಇದೇ ವೇಳೆ ಒತ್ತಾಯಿಸಿದರು.

ನೊಂದ ಅಭ್ಯರ್ಥಿಗಳು ಜನವರಿ 25ರಂದು ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ. ಆದರೆ ಅಲ್ಲಿಂದ ಇಲ್ಲಿವರೆಗೂ ಈ ಪತ್ರದ ಬಗ್ಗೆ ಯಾವುದೇ ಕ್ರಮ ವಹಿಸಿಲ್ಲ. ಆಗಿನ ಎಡಿಜಿಪಿ (ನೇಮಕಾತಿ) ಅಮೃತ್ ಪಾಲ್ ಮತ್ತು ಡಿವೈಎಸ್ಪಿ ಶಾಂತಕುಮಾರ್ ಅವರ ವರ್ಗಾವಣೆ ಈಗ ನಡೆದಿರುವುದು ಅಕ್ರಮಗಳಲ್ಲಿ ಭಾಗಿಯಾಗಿರುವುದಕ್ಕೆ ಪುಷ್ಠಿ ನೀಡಿದೆ. ಭಾಗಿಯಾದ ಇತರ ಅಧಿಕಾರಿಗಳ ಬಗ್ಗೆಯೂ ತನಿಖೆ ನಡೆಸಿ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.

Vishwa News 24

Recent Posts

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

1 hour ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

1 hour ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

1 hour ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

2 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

2 hours ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago