Featured

PSI ನೇಮಕಾತಿ ಹಗರಣ : ಅಶ್ವತ್ಥನಾರಾಯಣ ಅವರ ಬಗ್ಗೆ ಕಾಂಗ್ರೆಸ್‌ನವರು ಆಧಾರರಹಿತ ಆರೋಪ ಮಾಡುತ್ತಿದ್ದಾರೆ : ಮುಖ್ಯಮಂತ್ರಿ – Vishwanews24

PSI ನೇಮಕಾತಿ ಹಗರಣ : ಅಶ್ವತ್ಥನಾರಾಯಣ ಅವರ ಬಗ್ಗೆ ಕಾಂಗ್ರೆಸ್‌ನವರು ಆಧಾರರಹಿತ ಆರೋಪ ಮಾಡುತ್ತಿದ್ದಾರೆ : ಮುಖ್ಯಮಂತ್ರಿ

ಬೆಂಗಳೂರು: ‘ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ಬಗ್ಗೆ ಕಾಂಗ್ರೆಸ್‌ನವರು ಆಧಾರರಹಿತ ಆರೋಪ ಮಾಡುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಆರೋಪ ಮಾಡುವಾಗ ಸಣ್ಣ ಸಾಕ್ಷ್ಯವಾದರೂ ಬೇಕು. ಆದರೆ, ಜವಾಬ್ದಾರಿಯುತ ಪಕ್ಷವಾದ ಕಾಂಗ್ರೆಸ್‌ ಹಿಟ್‌ ಆ್ಯಂಡ್‌ ರನ್‌ ಮಾಡಲು ಹೊರಟಿದೆ’ ಎಂದು ಆರೋಪಿಸಿದರು.

‘ಕಾಂಗ್ರೆಸ್‌ ಅವಧಿಯಲ್ಲಿ ಹಲವು ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ. ಆ ಸಂದರ್ಭದಲ್ಲಿ ಅವರು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈಗ ನಾವು ಕ್ರಮ ತೆಗೆದುಕೊಳ್ಳುತ್ತೇವೆ. ಅವರ ಪಕ್ಷದ ಕೆಲವರ ಬಂಧನ ಆಗಿದೆ. ಎಲ್ಲಿ ಅವರ ಬಣ್ಣ ಬಯಲಾಗುತ್ತದೊ ಎಂದು ಹೆದರಿ ಸಾಕ್ಷ್ಯಾಧಾರಗಳಿಲ್ಲದೆ ಆರೋಪಗಳನ್ನು ಮಾಡುತ್ತಿದ್ದಾರೆ’ ಎಂದರು.

ನಿಷ್ಠುರ ತನಿಖೆ: ‘ಈ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂದ ದೂರುಗಳನ್ನೆಲ್ಲ ಪರಿಗಣಿಸಲಾಗುವುದು. ದಾಖಲೆಗಳನ್ನು ಪರಿಶೀಲಿಸಿ, ಎಲ್ಲವನ್ನೂ ತನಿಖೆ ಮಾಡುತ್ತೇವೆ. ಮುಕ್ತ, ನಿಷ್ಪಕ್ಷಪಾತ, ನಿಷ್ಠುರ ತನಿಖೆ ಆಗಬೇಕು ಎನ್ನುವುದು ನಮ್ಮ ನಿಲುವು. ಹೀಗಾಗಿ, ಹಲವು ಅಧಿಕಾರಿಗಳ ತಂಡ ರಚಿಸಿ ಕಾರ್ಯಾಚರಣೆ ಮಾಡುತ್ತಿದ್ದೇವೆ’ ಎಂದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ದಿವ್ಯಾ ಹಾಗರಗಿಯಷ್ಟೆ ಅಲ್ಲ. ಇನ್ನೂ ಹಲವರು ಈ ಪ್ರಕರಣದಲ್ಲಿ ಇದ್ದಾರೆ. ಎಲ್ಲರ ಮೇಲೂ ಕ್ರಮ ತೆಗೆದುಕೊಳ್ಳುತ್ತೇವೆ. ಅಧಿಕಾರಿಗಳನ್ನು ಅಮಾನತು ಮಾಡಿದ್ದೇ ಇದಕ್ಕೆ ಸಾಕ್ಷಿ’ ಎಂದರು.

Vishwa News 24

Recent Posts

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

10 minutes ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

15 minutes ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

44 minutes ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

58 minutes ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago