Featured

PSI ಪರೀಕ್ಷೆ :  ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟ – vishwanews24

PSI ಪರೀಕ್ಷೆ :  ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟ

ಜನವರಿ 23ರಂದು ಪಿಎಸ್‌ಐ ಪರೀಕ್ಷೆ

ಅಭ್ಯರ್ಥಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಎಲ್ಲರೂ ಈ ಸೂಚನೆ ಪಾಲಿಸಬೇಕು

ಬೆಂಗಳೂರು: ಇದೇ ಜನವರಿ 23ರಂದು ಪಿಎಸ್‌ಐ ಪರೀಕ್ಷೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಹಾಲ್‌ಟಿಕೆಟ್, ಗುರುತಿನ ಚೀಟಿ ಹೊರತುಪಡಿಸಿ ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋ ಫೋನ್, ಬ್ಲೂಟೂತ್, ಗಡಿಯಾರಗಳನ್ನು ತರುವಂತಿಲ್ಲ ಎಂದು ಸೂಚನೆಯಲ್ಲಿ ತಿಳಿಸಿದೆ. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಮಾರ್ಗಸೂಚಿಗಳನ್ನು  ಹೊರಡಿಸಲಾಗಿದೆ.

ಪುರುಷ ಅಭ್ಯರ್ಥಿಗಳಿಗೆ ಮಾರ್ಗಸೂಚಿ ಏನು?

* ಪೂರ್ಣ ತೋಳಿನ ಅಂಗಿಗಳನ್ನ ಧರಿಸುವಂತಿಲ್ಲ

* ಕಾಲರ್ ರಹಿತ ಶರ್ಟ್ ಹಾಗೂ ಜೇಬುಗಳು ಕಮ್ಮಿ ಇರುವ ಪ್ಯಾಂಟ್ ಧರಿಸಿರಬೇಕು

* ಕುರ್ತಾ ಪೈಜಾಮು, ಜೀನ್ಸ್ ಪ್ಯಾಂಟ್‌ಗಳಿಗೆ ಅನುಮತಿ ಇಲ್ಲ

* ಶರ್ಟ್ ಅಥವಾ ಪ್ಯಾಂಟ್‌ಗಳಿಗೆ ಜಿಪ್ ಪ್ಯಾಕೆಟ್‌ಗಳು, ದೊಡ್ಡ ದೊಡ್ಡ ಗುಂಡಿಗಳು, ಹೆಚ್ಚುವರಿ ಡಿಸೈನ್ ಇರಬಾರದು

* ಪರೀಕ್ಷಾ ಹಾಲ್‌ಗೆ ಶೂಗಳು ಕಟ್ಟು ನಿಟ್ಟಾಗಿ ನಿಷೇಧ

* ಸ್ಯಾಂಡಲ್ ಅಥವಾ ತೆಳುವಾದ ಚಪ್ಪಲಿ ಬಳಕೆಗೆ ಸೂಚನೆ

* ಚೈನ್, ಕಿವಿಯೋಲೆ, ಉಂಗುರ, ಕೈ ಕಡಗ ಧರಿಸುವುದು ನಿಷೇಧ

ಮಹಿಳಾ ಅಭ್ಯರ್ಥಿಗಳಿಗೆ ಮಾರ್ಗಸೂಚಿ ಏನು?

* ದೊಡ್ಡ ದೊಡ್ಡ ಡಿಸೈನ್, ಬಟನ್ ಇರೋ, ಹೂಗಳು ಇರೋ ಬಟ್ಟೆ ಧರಿಸುವಂತಿಲ್ಲ

* ಪೂರ್ಣ ತೋಳಿನ ಬಟ್ಟೆ ಬಳಸದಂತೆ ಸೂಚನೆ

* ಮುಜುಗರವಾಗದಂತೆ ಅರ್ಧ ತೋಳಿನ ಬಟ್ಟೆ ಬಳಸಬೇಕು

* ಇನ್ನೊಬ್ಬರಿಗೆ ಮುಜುಗರವಾಗದ ಟಾಪ್‌ಗಳು ಬಳಸಲು ಸೂಚನೆ

* ಹೈ ಹೀಲ್ಸ್ ಚಪ್ಪಲಿ-ಶೂಗಳನ್ನ ಧರಿಸದಂತೆ ಸೂಚನೆ

* ಮಹಿಳಾ ಅಭ್ಯರ್ಥಿಗಳಿಗೂ ಕೂಡ ಯಾವುದೇ ರೀತಿಯ ಲೋಹ, ಚೈನ್ ಬಳಸದಂತೆ ಸೂಚನೆ

* ಮಂಗಳ ಸೂತ್ರ, ಕಾಲುಂಗುರ ಬಳಸಲು ಅನುಮತಿ

ಪರೀಕ್ಷಾ ಕೊಠಡಿಗೆ ಈ ಪತ್ರಗಳು ಕಡ್ಡಾಯ:

* ಪ್ರವೇಶ ಪತ್ರ ಕಡ್ಡಾಯವಾಗಿ ತರಬೇಕು

* ಸರ್ಕಾರದಿಂದ ಮಾನ್ಯವಾದ ಗುರುತಿನ ಚೀಟಿ ಕಡ್ಡಾಯವಾಗಿರಬೇಕು.

ಎಲ್ಲರೂ ಈ ಸೂಚನೆ ಪಾಲಿಸಬೇಕು:

ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರತುಪಡಿಸಿ ಉಳಿದಂತೆ ಎಲ್ಲರೂ ಪಾಲಿಸುವ ಕೆಲವು ಸೂಚನೆಗಳನ್ನು ನೀಡಲಾಗಿದೆ. ಅಲ್ಲದೇ ಎಲ್ಲಾ ಅಭ್ಯರ್ಥಿಗಳಿಗೂ ಈ ಕೆಳಗಿನ ವಸ್ತುಗಳು ಬಳಸದಂತೆ ಸೂಚನೆ ನೀಡಲಾಗಿದೆ. ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್‌ಡ್ರೈವ್‌, ಇಯರ್ ಫೋನ್, ಮೈಕ್ರೋ ಫೋನ್, ಬ್ಲೂಟೂತ್, ಗಡಿಯಾರಗಳನ್ನು ಪರೀಕ್ಷಾ ಹಾಲ್‌ಗೆ ಕೊಂಡೊಯ್ಯುವಂತಿಲ್ಲ.

ಯಾವುದೇ ರೀತಿಯ ಆಹಾರ, ನೀರಿನ ಬಾಟಲಿಗೆ ಅವಕಾಶ ಇಲ್ಲ. ಪರೀಕ್ಷಾ ಕೇಂದ್ರದಲ್ಲಿಯೇ ನೀರು ಕುಡಿಯಲು ವ್ಯವಸ್ಥೆ ಇರುತ್ತೆ. ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್, ಲಾಗ್ ಟೇಬಲ್‌ಗಳು ಪರೀಕ್ಷಾ ಕೇಂದ್ರಕ್ಕೆ ನಿಷೇಧವಿರಲಿದೆ. ಯಾವುದೇ ಅಭ್ಯರ್ಥಿ ಟೋಪಿ ಧರಿಸುವಂತಿಲ್ಲ. ಕೊನೆಯ ಬೆಲ್ ಹೊಡೆಯೋವರೆಗೂ ಪರೀಕ್ಷಾ ಹಾಲ್‌ನಿಂದ ಅಭ್ಯರ್ಥಿಗಳು ಹೊರ ಹೋಗುವಂತಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾರ್ಗಸೂಚಿಯಲ್ಲಿ ತಿಳಿಸಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

13 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

13 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

14 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

14 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

14 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

14 hours ago