ಚಿಕ್ಕೋಡಿ: ಆರ್‌ಎಂಡಿ ಹೆಸರಿನ ನಕಲಿ ಪಾನ್ ಮಸಲಾ ತಯಾರಿಸಿ ಬೆಳಗಾವಿ ಜಿಲ್ಲೆ ಸೇರಿದಂತೆ ದೇಶಾದ್ಯಂತ ಮಾರಾಟ ಮಾಡುತ್ತಿದ್ದ ಜಾಲವನ್ನು ಬೆಳಗಾವಿ ಜಿಲ್ಲೆಯ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಇದೇ ಮೇ ತಿಂಗಳಲ್ಲಿ ಖಾಸಗಿ ಕಂಪನಿಯ ದೂರನ್ನು ಪರಿಗಣಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಪ್ರತ್ಯೇಕ ತಂಡವನ್ನು ರಚಿಸಿ ತನಿಖೆ ಆರಂಭಿಸಿದರು. ಈ ವೇಳೆ ಆರೋಪಿಗಳು ಕೇವಲ ಆರ್‌ಎಂಡಿ ಮಾತ್ರ ಅಲ್ಲದೇ ವಿವಿಧ ಪಾನ್ ಮಸಲಾ ಸೇರಿದಂತೆ ದೇಶಾದ್ಯಂತ ಚಲಾವಣೆಯಲ್ಲಿರುವ ನಾನಾ ಕಂಪನಿಯ ಉತ್ಪನ್ನಗಳನ್ನು ಖೊಟ್ಟಿಯಾಗಿ ತಯಾರಿಸುತ್ತಿರುವುದು ತಿಳಿದು ಬಂದಿದೆ.
ಸದಲಗಾ ಪಟ್ಟಣದಲ್ಲಿ ರೇಡ್ ಮಾಡಿ ಆರೋಪಿಗಳ ವಿಚಾರಣೆ ನಡೆಸಿದಾಗ, ಸರ್ಕಾರಕ್ಕೆ ಆರೋಪಿಗಳಿಂದ ಕೋಟ್ಯಂಂತರ ರೂಪಾಯಿ ತೆರಿಗೆ ಹಣ ವಂಚನೆ ಆಗಿರುವ ವಿಚಾರ ಬಹಿರಂಗಗೊಂಡಿದೆ. ಸಾರ್ವಜನಿಕರ ಆರೋಗ್ಯಕ್ಕೂ ನಕಲಿ ಪಾನ್ ಮಸಾಲಾದಿಂದ ಹಾನಿಯಾಗುತ್ತಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮುಂದುವರೆಸಿದ ಅಧಿಕಾರಿಗಳು, ಹೈದರಾಬಾದ್ ಮೂಲದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ನಂತರ ಬೆಂಗಳೂರು ಹಾಗೂ ದೆಹಲಿಯಲ್ಲಿ ಕೂಡ ಇವರ ನಕಲಿ ಉತ್ಪಾದನೆಯ ಕಾರ್ಖಾನೆಗಳ ಮೇಲೆ ದಾಳಿ ನಡೆಸಿ ಎಲ್ಲ ಸಾಮಾಗ್ರಿ, ಯಂತ್ರೋಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ.
ಇದೀಗ ಕರ್ನಾಟಕದ ಇಬ್ಬರು, ತೆಲಂಗಾಣದ ಓರ್ವ ಹಾಗೂ ದೆಹಲಿಯ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಮತ್ತು ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಯಂತ್ರೋಪಕರಣಗಳು ಹಾಗೂ ಲಕ್ಷಾಂತರ ರೂ. ಮೌಲ್ಯದ ಕಚ್ಚಾ ವಸ್ತುಗಳನ್ನು ವಶಕ್ಕೆ ಪಡೆದು ಐವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪೊಲೀಸರ ಕಾರ್ಯವೈಖರಿಗೆ ಪಾನ್ ಮಸಾಲಾ ಕಂಪನಿಯ ಸಿಬ್ಬಂದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…