ವಾಷಿಂಗ್ಟನ್: ಎಸ್.ಎಸ್ ರಾಜಮೌಳಿ ನಿರ್ದೇಶನದ ಜ್ಯೂನಿಯರ್ ಎನ್. ಟಿ.ಆರ್ ಮತ್ತು ರಾಮ್ ಚರಣ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಆರ್.ಆರ್.ಆರ್ ಸಿನಿಮಾಗೆ ಮತ್ತೊಂದು ಗರಿ ಲಭಿಸಿದೆ.
ಸಿನಿಮಾದ ‘ನಾಟು ನಾಟು‘ ಹಾಡಿಗೆ 2023ರ ಗೋಲ್ಡನ್ ಗ್ಲೋಬ್ ಅವಾರ್ಡ್ಸ್ ಪ್ರಾಪ್ತವಾಗಿದೆ. ‘ಬೆಸ್ಟ್ ಒರಿಜಿನಲ್ ಸಾಂಗ್‘ ವಿಭಾಗದಲ್ಲಿ ಈ ಹಾಡಿಗೆ ಪ್ರಶಸ್ತಿ ಲಭಿಸಿದೆ. ತೆಲುಗು ಹಾಡಿಗೆ ಈ ಗೌರವ ಲಭಿಸಿದೆ.
ತೆಲುಗು ಭಾಷೆಯ ‘ನಾಟು ನಾಟು‘ ಹಾಡನ್ನು ದಿಗ್ಗಜ ಸಂಗೀತ ನಿರ್ದೇಶಕ ಎಂ.ಎಂ ಕೀರವಾಣಿ ಅವರು ಸಂಯೋಜಿಸಿದ್ದು, ಕಾಲ ಭೈರವ ಹಾಗೂ ರಾಹುಲ್ ಸಿಪ್ಲಿಗುಂಜ್ ಅವರು ಬರೆದಿದ್ದಾರೆ.
ಇಂಗ್ಲಿಷ್ ಹೊರತಾದ ಅತ್ಯುತ್ತಮ ಸಿನಿಮಾ’ ಹಾಗೂ ‘ಅತ್ಯುತ್ತಮ ಹಾಡು’ ವಿಭಾಗದಲ್ಲಿ ಈ ಚಿತ್ರ ಆಯ್ಕೆಯಾಗಿತ್ತು. ಹಲವು ಇಂಗ್ಲಿಷೇತರ ಸಿನಿಮಾಗಳನ್ನು ಹಿಂದಿಕ್ಕಿ ಇದೀಗ ಅತ್ಯುತ್ತಮ ಹಾಡು ವಿಭಾಗದಲ್ಲಿ ‘ನಾಟು ನಾಟು‘ ಹಾಡು ಪ್ರಶಸ್ತಿ ಬಾಚಿಕೊಂಡಿದೆ.
ಇನ್ನು ಪ‍್ರಶಸ್ತಿ ಗೆದ್ದ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ‘ಎಂತಹ ಐತಿಹಾಸಿಕ ಸಾಧನೆ! ಗೋಲ್ಡನ್ ಗ್ಲೋಬ್ಸ್ ಅತ್ಯುತ್ತಮ ಮೂಲ ಹಾಡು – ಮೋಷನ್ ಪಿಕ್ಚರ್ ಪ್ರಶಸ್ತಿ ಲಭಿಸಿದೆ. ಕೀರವಾಣಿ ಅವರಿಗೆ, ರಾಜಮೌಳಿ ಅವರಿಗೆ ಹಾಗೂ ಆರ್.ಆರ್.ಆರ್ ಸಿನಿಮಾ ತಂಡಕ್ಕೆ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು! ಭಾರತವು ನಿಮ್ಮ ಬಗ್ಗೆ ಹೆಮ್ಮೆಪಡುತ್ತದೆ‘ ಎಂದು ಮೆಗಾಸ್ಟಾರ್ ಚಿರಂಜೀವಿ ಟ್ವೀಟ್ ಮಾಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…