ಹುಬ್ಬಳ್ಳಿ: ಆರ್‌ಎಸ್‌ಎಸ್‌ಗೆ ಕೈ ಹಾಕಿದ ನೆಹರೂ ಹಾಗೂ ಇಂದಿರಾ ಗಾಂಧಿ ಅವರು ಸುಟ್ಟು ಹೋಗಿದ್ದಾರೆ, ಆರ್‌ಎಸ್‌ಎಸ್ ಚಡ್ಡಿಗೆ ಬೆಂಕಿ ಹಚ್ಚಲು ಹೇಳಿದ ಸಿದ್ದರಾಮಯ್ಯ ಕೂಡ ಸುಟ್ಟು ಹೋಗುತ್ತಾರೆ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಹತ್ತಾರು ಗಲಭೆಗಳ ಹಿಂದೆ ಕಾಂಗ್ರೆಸ್ ಕೈವಾಡ ಇದೆ. ಬೆಂಕಿ ಹಾಕುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಶಿವಮೊಗ್ಗ ಮತ್ತು ಹುಬ್ಬಳ್ಳಿಯ ಗಲಭೆ ಹಿಂದೆ ಕಾಂಗ್ರೆಸ್ ಇದೆ. ಆದರೆ ಆರ್‌ಎಸ್‌ಎಸ್ ಒಂದು ಸೇವಾ ಸಂಸ್ಥೆಯಾಗಿದ್ದು, ದೇಶಭಕ್ತರನ್ನು ನಿರ್ಮಾಣ ಮಾಡುತ್ತದೆ. ಇದಕ್ಕೆ ಕೈ ಹಾಕಿದ ನೆಹರೂ ಮತ್ತು ಇಂದೀರಾ ಗಾಂಧಿ ಸುಟ್ಟು ಹೋಗಿದ್ದಾರೆ. ಕಾಂಗ್ರೆಸ್ ಬೆಂಕಿಗೆ ಕೈ ಹಾಕಿ ಸುಟ್ಟು ಹೋಗುತ್ತದೆ. ಆರ್‍ಎಸ್‍ಎಸ್ ಚಡ್ಡಿಗೆ ಬೆಂಕಿ ಹಾಕಲು ಸಿದ್ದರಾಮಯ್ಯ ಹೇಳಿದ್ದಾರೆ, ಅವರೇ ಸುಟ್ಟು ಹೋಗುತ್ತಾರೆ ಎಂದು ಎಂದಿದ್ದಾರೆ.
ರಾಜ್ಯದಲ್ಲಿ ಅತಂತ್ರ ಸ್ಥಿತಿಯನ್ನು ಉಂಟು ಮಾಡಲು ಕಾಂಗ್ರೆಸ್ ಬೆಂಕಿ ಹಚ್ಚಲು ಮುಂದಾಗಿದೆ. ಮುಂದಿನ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ನಾಯಕರು ಇಲ್ಲ, ಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಆದ ಗಲಾಟೆಗಳಿಗೆ ಅವರ ವೈಫಲ್ಯವೇ ಕಾರಣ. ರಾಜ್ಯದಲ್ಲಿ ನಡೆಯುವ ಒಳ್ಳೆಯ ಕಾರ್ಯಗಳಿಗೆ ಸಿದ್ದರಾಮಯ್ಯ ಬೆಂಬಲ ಮಾಡಲ್ಲ. ಅವರು ಎಲ್ಲಾ ವಿಚಾರದಲ್ಲಿ ಮಾತನಾಡಬೇಕು ಅಂತ ಮಾತನಾಡತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…