Featured

RSS ಚಡ್ಡಿಗೆ ಬೆಂಕಿ ಹಚ್ಚಲು ಹೇಳಿದ ಸಿದ್ದರಾಮಯ್ಯ ಕೂಡ ಸುಟ್ಟು ಹೋಗುತ್ತಾರೆ : ನಳೀನ್ ಕುಮಾರ್ ಕಟೀಲ್ – Vishwnaews24

RSS ಚಡ್ಡಿಗೆ ಬೆಂಕಿ ಹಚ್ಚಲು ಹೇಳಿದ ಸಿದ್ದರಾಮಯ್ಯ ಕೂಡ ಸುಟ್ಟು ಹೋಗುತ್ತಾರೆ : ನಳೀನ್ ಕುಮಾರ್ ಕಟೀಲ್ – Vishwnaews24

ಹುಬ್ಬಳ್ಳಿ: ಆರ್‌ಎಸ್‌ಎಸ್‌ಗೆ ಕೈ ಹಾಕಿದ ನೆಹರೂ ಹಾಗೂ ಇಂದಿರಾ ಗಾಂಧಿ ಅವರು ಸುಟ್ಟು ಹೋಗಿದ್ದಾರೆ, ಆರ್‌ಎಸ್‌ಎಸ್‌ ಚಡ್ಡಿಗೆ ಬೆಂಕಿ ಹಚ್ಚಲು ಹೇಳಿದ ಸಿದ್ದರಾಮಯ್ಯ ಕೂಡ ಸುಟ್ಟು ಹೋಗುತ್ತಾರೆ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಹತ್ತಾರು ಗಲಭೆಗಳ ಹಿಂದೆ ಕಾಂಗ್ರೆಸ್ ಕೈವಾಡ ಇದೆ. ಬೆಂಕಿ ಹಾಕುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಶಿವಮೊಗ್ಗ ಮತ್ತು ಹುಬ್ಬಳ್ಳಿಯ ಗಲಭೆ ಹಿಂದೆ ಕಾಂಗ್ರೆಸ್ ಇದೆ. ಆದರೆ ಆರ್‌ಎಸ್‌ಎಸ್‌ ಒಂದು ಸೇವಾ ಸಂಸ್ಥೆಯಾಗಿದ್ದು, ದೇಶಭಕ್ತರನ್ನು ನಿರ್ಮಾಣ ಮಾಡುತ್ತದೆ. ಇದಕ್ಕೆ ಕೈ ಹಾಕಿದ ನೆಹರೂ ಮತ್ತು ಇಂದೀರಾ ಗಾಂಧಿ ಸುಟ್ಟು ಹೋಗಿದ್ದಾರೆ. ಕಾಂಗ್ರೆಸ್ ಬೆಂಕಿಗೆ ಕೈ ಹಾಕಿ ಸುಟ್ಟು ಹೋಗುತ್ತದೆ. ಆರ್‍ಎಸ್‍ಎಸ್ ಚಡ್ಡಿಗೆ ಬೆಂಕಿ ಹಾಕಲು ಸಿದ್ದರಾಮಯ್ಯ ಹೇಳಿದ್ದಾರೆ, ಅವರೇ ಸುಟ್ಟು ಹೋಗುತ್ತಾರೆ ಎಂದು ಎಂದಿದ್ದಾರೆ.

ರಾಜ್ಯದಲ್ಲಿ ಅತಂತ್ರ ಸ್ಥಿತಿಯನ್ನು ಉಂಟು ಮಾಡಲು ಕಾಂಗ್ರೆಸ್ ಬೆಂಕಿ ಹಚ್ಚಲು ಮುಂದಾಗಿದೆ. ಮುಂದಿನ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ನಾಯಕರು ಇಲ್ಲ, ಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಆದ ಗಲಾಟೆಗಳಿಗೆ ಅವರ ವೈಫಲ್ಯವೇ ಕಾರಣ. ರಾಜ್ಯದಲ್ಲಿ ನಡೆಯುವ ಒಳ್ಳೆಯ ಕಾರ್ಯಗಳಿಗೆ ಸಿದ್ದರಾಮಯ್ಯ ಬೆಂಬಲ ಮಾಡಲ್ಲ. ಅವರು ಎಲ್ಲಾ ವಿಚಾರದಲ್ಲಿ ಮಾತನಾಡಬೇಕು ಅಂತ ಮಾತನಾಡತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

 

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

10 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

12 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

12 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

12 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

12 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

13 hours ago