ಚಿತ್ರದುರ್ಗ: ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್ ಅವರಿಗೆ ಸಂಬಂಧಿಸಿದ ಪಠ್ಯವನ್ನು ಕೈಬಿಡುವುದಿಲ್ಲ. ಅವರ ಪಠ್ಯ ಇದ್ದರೆ ತಪ್ಪೇನು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.
ಹಿರಿಯೂರು ತಾಲ್ಲೂಕಿನ ದೇವರಕೊಟ್ಟ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಹಿತ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಸಮಿತಿ ಕಾರ್ಯ ಮುಗಿದಿದೆ.
ಹೀಗಾಗಿ ಅದನ್ನು ವಿಸರ್ಜನೆ ಮಾಡಲಾಗಿದೆಯೇ ಹೊರತು ರದ್ದು ಮಾಡಿಲ್ಲ. ಹೊಸ ಸಮಿತಿ ರಚನೆಯ ಅವಶ್ಯಕತೆ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.
‘ಪಠ್ಯಪುಸ್ತಕ ವಿಚಾರದಲ್ಲಿ ಚರ್ಚೆ ನಡೆದ ಬಳಿಕ ಪರಿಶೀಲಿಸುವುದಾಗಿ ಆರಂಭದಲ್ಲೇ ಹೇಳಿದ್ದೆ. ವಾಸ್ತವಾಂಶದ ಆಧಾರದ ಮೇರೆಗೆ ಕೆಲ ಬದಲಾವಣೆ ಮಾಡಲಾಗುತ್ತಿದೆ. ಮಠಾಧೀಶರ ಒತ್ತಡಕ್ಕೆ ಮಣಿದು ಈ ತೀರ್ಮಾನ ಕೈಗೊಂಡಿಲ್ಲ’ ಎಂದು ಹೇಳಿದರು.
‘ಪಠ್ಯಪುಸ್ತಕವನ್ನು ನಾನೂ ಗಮನಿಸಿರಲಿಲ್ಲ. ಶುಕ್ರವಾರ ಪಠ್ಯಪುಸ್ತಕ ಪರಿಶೀಲನೆ ಮಾಡಿದೆ. ಬರಗೂರು ರಾಮಚಂದ್ರಪ್ಪ ಸಮಿತಿ ರಚಿಸಿದ್ದ ಪಠ್ಯಕ್ಕೂ ಪರಿಷ್ಕೃತ ಪಠ್ಯಕ್ಕೂ ಒಂದು ವಾಕ್ಯ ಮಾತ್ರ ವ್ಯತ್ಯಾಸವಿದೆ. ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ಅವರು ಪ್ರಶ್ನಿಸಿದ ಲಿಂಗದೀಕ್ಷೆ ಬರಗೂರು ಸಮೀತಿಯ ಪಠ್ಯದಲ್ಲಿಯೇ ಇತ್ತು. ಇದನ್ನು ಮಠಾಧೀಶರಿಗೆ ಮನವರಿಕೆ ಮಾಡಿಕೊಡಲಾಗಿದೆ’ ಮದು ಹೇಳಿದರು.
‘ನಮ್ಮದು ಬಸವ ಪಥದ ಸರ್ಕಾರ ಎಂದು ಮೊದಲೇ ಹೇಳಿದ್ದೇನೆ. ಬಸವಣ್ಣನವರು ರಚಿಸಿದ ಹಲವಾರು ಅತ್ಯುತ್ತಮ ವಚನಗಳು ಪಠ್ಯದಲ್ಲಿವೆ. ಆದಷ್ಟು ಶೀಘ್ರದಲ್ಲಿ ಮಕ್ಕಳಿಗೆ ಪರಿಷ್ಕೃತ ಪಠ್ಯ ಪುಸ್ತಕ ಒದಗಿಸುತ್ತೇವೆ’ ಎಂದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…