Featured

SC , ST ಮೀಸಲಾತಿ ಹೆಚ್ಚಳ : 9ನೇ ಶೆಡ್ಯೂಲ್ ಗೆ ಸೇರಿಸುವ ಪ್ರಕ್ರಿಯೆ ಪ್ರಾರಂಭ : ಸಿಎಂ ಬೊಮ್ಮಾಯಿ – Vishwanews24

SC , ST ಮೀಸಲಾತಿ ಹೆಚ್ಚಳ : 9ನೇ ಶೆಡ್ಯೂಲ್ ಗೆ ಸೇರಿಸುವ ಪ್ರಕ್ರಿಯೆ ಪ್ರಾರಂಭ : ಸಿಎಂ ಬೊಮ್ಮಾಯಿ

ದಾವಣಗೆರೆ : ಎಸ್ ಸಿ ಎಸ್ ಟಿ ಸಮಾಜಕ್ಕೆ ನ್ಯಾಯ ದೊರಕಿಸುಕೊಡುವುದೇ ನಮ್ಮ ಸರ್ಕಾರದ ಏಕೈಕ ಗುರಿಯಾಗಿದ್ದು, ಎಸ್ ಸಿ ಎಸ್ ಟಿ ಮೀಸಲಾತಿ ಹೆಚ್ಚಳವನ್ನು9ನೇ ಶೆಡ್ಯೂಲ್ ಗೆ ಸೇರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ನಿನ್ನೆ ‘ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವ’ ಅಂಗವಾಗಿ ‘ಜನಜಾಗೃತಿ ಜಾತ್ರಾ ಮಹೋತ್ಸವದ ಉದ್ಘಾಟನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ’ದಲ್ಲಿ ಪಾಲ್ಗೊಂಡು ಮಾತನಾಡಿ, ನಾಗಮೋಹನ್ ದಾಸ್ ವರದಿಯಂತೆ ತುಳಿತಕ್ಕೊಳಗಾಗಿರುವ ಸಮಾಜದವರ ಪರವಾಗಿ ನ್ಯಾಯ ನೀಡಲಾಗಿದೆ.. ಎಸ್ ಸಿ ವರ್ಗಕ್ಕೆ ಶೇ. 15 ರಿಂದ ಶೇ. 17 ಮತ್ತು ಎಸ್ ಟಿ ಗೆ 3 ರಿಂದ ಶೇ. 7 ಕ್ಕೆ ಹೆಚ್ಚಿಸಲಾಗಿದೆ. ತಳಸಮುದಾಯದ ಯುವಜನತೆಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಹೆಚ್ಚಿನ ಲಾಭ ದೊರೆಯಲಿದೆ. ಈ ಹೆಚ್ಚಳಕ್ಕೆ ಕಾನೂನಿನ ರಕ್ಷಣೆಯನ್ನು ಈಗಾಗಲೇ ಸರ್ಕಾರ ನೀಡಿದೆ.. ಕೇವಲ ಭಾಷಣದಿಂದ ಸಾಮಾಜಿಕ ನ್ಯಾಯ ಸಿಗುವುದಿಲ್ಲ. ಮೀಸಲಾತಿ ಹೆಚ್ಚಳವನ್ನು ಸರ್ಕಾರ ಈಗಾಗಲೇ ಜಾರಿ ಮಾಡಿದ್ದು, ಸರ್ಕಾರದ ನೇಮಕಾತಿಗಳಲ್ಲಿ ಈ ನಿಯಮವನ್ನು ಈಗಾಗಲೇ ಪಾಲಿಸಲಾಗುತ್ತಿದೆ ಎಂದರು.

ಪರಿಶಿಷ್ಟ ಪಂಗಡದ ಸಮುದಾಯಗಳ ಅಭಿವೃದ್ಧಿ ಪ್ರತ್ಯೇಕ ಸಚಿವಾಲಯ 
ನಾನು ಬಯಸಿ ಮುಖ್ಯಮಂತ್ರಿಯಾದವನಲ್ಲ. ನಮ್ಮನಾಯಕರು ಹಾಗೂ ಜನರಿಂದ ಈ ಆಶೀರ್ವಾದ ನನಗೆ ದೊರೆಯಿತು. ಪರಿಶಿಷ್ಟ ಪಂಗಡದ ಸಮುದಾಯಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅನುಷ್ಠಾನಗೊಳಿಸಲು ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಲಾಗಿದೆ. 75 ಯೂನಿಟ್ ಉಚಿತ ವಿದ್ಯುತ್ , ಸಮುದಾಯದ ರೈತರಿಗೆ ಜಮೀನು ಖರೀದಿಗೆ 25 ಲಕ್ಷದವರೆಗೆ ಅನುದಾನ, ಮನೆ ನಿರ್ಮಾಣಕ್ಕೆ 2 ಲಕ್ಷ, ಹಾಸ್ಟೆಲ್ ಗಳ ಹೆಚ್ಚಳ ಮಾಡಲಾಗಿದೆ. ಸಮುದಾಯದ ಯುವಕರಿಗೆ ಸ್ವಯಂ ಉದ್ಯೋಗಕ್ಕೆ ಸಹಕಾರ ನೀಡಲಾಗುತ್ತಿದೆ. ಪರಿಶಿಷ್ಟ ಪಂಗಡದ ಬುಡಕಟ್ಟು ಸಮುದಾಯಗಳಿಗೆ ಹೆಚ್ಚಿನ ಅನುದಾನವನ್ನು ಕೇಂದ್ರ ಸರ್ಕಾರ ನೀಡಿದೆ. ಬುಡಕಟ್ಟು ಜನಾಂಗಕ್ಕೆ ಸೇರಿದ ಶ್ರೀಮತಿ ದ್ರೌಪದಿ ಮುರ್ಮು ಅವರು ಗೌರವಾನ್ವಿತ ರಾಷ್ಟ್ರಪತಿಗಳಾಗಿದ್ದಾರೆ. ಸಮುದಾಯದ ಜನನಾಯಕರಿಗೆ ಸರ್ಕಾರದಲ್ಲಿ ಪ್ರಮುಖ ಸ್ಥಾನಮಾನಗಳನ್ನು ನೀಡಲಾಗಿದೆ ಎಂದರು.

ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿ, ಸಚಿವರಾದ ಆನಂದ್ ಸಿಂಗ್, ಶಾಸಕ ರಾಜು ಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago