Scdcc ಬ್ಯಾಂಕ್ ಮತ್ತು ನವೋದಯ ಗ್ರಾ.ವಿ.ಚಾರಿಟೇಬಲ್ ಟ್ರಸ್ಟ್ – ಕಾಪು ವಿಧಾನಸಭಾ ಕ್ಷೇತ್ರದ ಆಶಾ ಕಾರ್ಯಕರ್ತೆಯರಿಗೆ ಮತ್ತು ನವೋದಯ ಪ್ರೇರಕಿಯರಿಗೆ ಕಿಟ್ ವಿತರಣೆ. vishwanews24 video

Scdcc ಬ್ಯಾಂಕ್ ಮತ್ತು ನವೋದಯ ಗ್ರಾ.ವಿ.ಚಾರಿಟೇಬಲ್ ಟ್ರಸ್ಟ್ – ಕಾಪು ವಿಧಾನಸಭಾ ಕ್ಷೇತ್ರದ ಆಶಾ ಕಾರ್ಯಕರ್ತೆಯರಿಗೆ ಮತ್ತು ನವೋದಯ ಪ್ರೇರಕಿಯರಿಗೆ ಕಿಟ್ ವಿತರಣೆ.

ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮತ್ತು ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಡಾ.ಎಮ್ ಎನ್ ರಾಜೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕೊರೋನಾ ವಿರುದ್ಧ ಸೇವೆ ಸಲ್ಲಿಸುತ್ತಿರುವ ಮೂರು ಸಾವಿರ ಆಶಾ ಕಾರ್ಯಕರ್ತೆಯರಿಗೆ ಪಡಿತರ ಕಿಟ್ ಮತ್ತು ಸಹಾಯ ಧನದ ಕಿಟ್ ವಿತರಣೆ ಕಾರ್ಯಕ್ರಮದ ಅಂಗವಾಗಿ ಕಾಪು ವಿಧಾನಸಭಾ ಕ್ಷೇತ್ರದ ಸುಮಾರು 206 ಆಶಾ ಕಾರ್ಯಕರ್ತೆಯರಿಗೆ ಮತ್ತು ನವೋದಯ ಪ್ರೇರಕಿಯರಿಗೆ ಕಾಪುವಿನಲ್ಲಿ ಶಾಸಕ ಲಾಲಾಜಿ ಆರ್ ಮೆಂಡನ್ ಕಿಟ್ ವಿತರಿಸಿದರು.

 

ತದನಂತರ ಮಾತಾಡಿದ ಅವರು”ಕೊರೋನಾ ವಿರುದ್ದ ಕೆಲಸ ಮಾಡುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ವವಾಗಿದ್ದು,ಪ್ರಾಮಾಣಿಕ ಸೇವೆ ಮಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಗೌರವಿಸುವುದು ಧರ್ಮ ಮತ್ತು ಕರ್ತವ್ಯ.ಉಡಪಿ ಜಿಲ್ಲೆ ಕೊರೋನಾ ಹತೋಟಿಯಲ್ಲಿದೆ ಯಾರು ಕೂಡ ಮೈಮರೆದು ವರ್ತಿಸಬಾರದು,ದಾನಿಗಳ ಸಹಕಾರದಿಂದ ಇಡೀ ಉಡುಪಿ ಜಿಲ್ಲೆಯಲ್ಲಿ ಕಿಟ್ ವಿತರಣೆ ಮತ್ತು ಊಟದ ವ್ಯವಸ್ಥೆ ಆಗುತ್ತಿದೆ ಇದೊಂದು ರಾಜ್ಯಕ್ಕೆ ಮಾದರಿ” ಎಂದರು.

ಪ್ರಸ್ವಾವಿಕ ಮಾತುಗಳನ್ನಾಡಿದ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಡಾ ದೇವಿಪ್ರಸಾದ್ ಶೆಟ್ಟಿ “ಡಾ.ಎಮ್ ಎನ್ ರಾಜೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಕೊರೋನಾ ವಿರುದ್ದ ಸೇವೆ ಮಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮತ್ತು ನವೋದಯ ಸ್ವಸಹಾಯ ಸಂಘದ ಪ್ರೇರಕಿಯರಿಗೆ ಆಹಾರ ಕಿಟ್ ವಿತರಣೆ ಮತ್ತು ಪ್ರೋತ್ಸಾಹ ಧನಸಹಾಯ ನೀಡುವ ಯೋಜನೆ ಇದಾಗಿದ್ದುಸ್ವಾರ್ಥ ರಹಿತ ಸೇವೆ ಮಾಡುತ್ತಿರುವ ಕೊರೋನಾ ವಾರಿಯರ್ಸ್ ಗೆ ಹಲ್ಲೆ ಅಥಾವ ಬೆದರಿಕೆ ಹಾಕುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವ ಕಾರ್ಯ ಮಾಡಬೇಕೆಂದರು.

ಈ ಸಂಧರ್ಭದಲ್ಲಿ ಕಾಪು ತಾಲೂಕು ತಹಶಿಲ್ದಾರ್ ಮಹಮ್ಮದ್ ಇಸಾಕ್, ಕಾಪು ಆರೋಗ್ಯ ಕೇಂದ್ರದ ವೈಧ್ಯಧಿಕಾರಿ ಸುಬ್ರಯಾ ಕಾಮತ್, SCDCC ಬ್ಯಾಂಕಿನ ನಿರ್ದೇಶಕ ರಾಜೇಶ್ ರಾವ್ ಪಾಂಗಾಳ,ಕರ್ನಾಟಕ ರಾಜ್ಯ ಹಾಲು ಮಾರಾಟ ಮಹಾ ಮಂಡಳಿಯ ನಿರ್ದೇಶಕ ಕಾಪು ದಿವಾಕರ್ ಶೆಟ್ಟಿ,ಪಡುಬಿದ್ರಿ ಸಹಕಾರಿ ಬ್ಯಾಂಕ್ ಅಧ್ಯಕ್ಷ ವೈ.ಸುಧಿರ್ ಕುಮಾರ್,ಶಿರ್ವ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಕುತ್ಯಾರ್ ಪ್ರಸಾದ್ ಶೆಟ್ಟಿ,ಮೂಡಬೆಳ್ಳೆ ಸಿ.ಎ ಬ್ಯಾಂಕ್ ಅಧ್ಯಕ್ಷ ಶಿವಾಜಿ ಸುವರ್ಣ, ಕಟಪಾಡಿ ಸಿ.ಎ ಬ್ಯಾಂಕ್ ಅಧ್ಯಕ್ಷ ಇಂದುಶೇಖರ್ ಸುವರ್ಣ,ಕಾಪು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಮಾಧವ ಆರ್ ಪಾಲನ್,ಕಾಪು ಎಸ್.ಸಿ.ಡಿ.ಸಿ.ಸಿ.ಬ್ಯಾಂಕ್ ಶಾಖಾ ಪ್ರಬಂಧಕ ಪ್ರಬೋದ್ಚಂದ್ರ,ನವೋದಯ ಸ್ವ.ಸಂಘದ ಮೇಲ್ವಿಚಾರಕರಾದ ಹರೀನಾಥ್,ಬಾಲಕೃಷ್ಣ ಭಟ್,ಚಂದ್ರಶೇಖರ ಉಪಸ್ಥಿತರಿದ್ದರು.

 

 

Facebook video News

Youtube video News

 

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

11 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

12 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago