SDPI ಮತ್ತು PFI ಬ್ಯಾನ್ ಬಗ್ಗೆ ಚರ್ಚೆ ಮಾಡಿ ನಿರ್ಧಾರ : ಆರಗ ಜ್ಞಾನೇಂದ್ರ – Vishwanews24
SDPI ಮತ್ತು PFI ಬ್ಯಾನ್ ಬಗ್ಗೆ ಚರ್ಚೆ ಮಾಡಿ ನಿರ್ಧಾರ : ಆರಗ ಜ್ಞಾನೇಂದ್ರ – Vishwanews24
ಬೆಂಗಳೂರು: ಎಸ್ಡಿಪಿಐ (SDPI) ಮತ್ತು ಪಿಎಫ್ಐ (PFI) ಬ್ಯಾನ್ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಸಕರೂ ಸೇರಿದಂತೆ ಎಲ್ಲರೂ ಈ ಸಂಘಟನೆಗಳನ್ನು ಬ್ಯಾನ್ ಮಾಡಲು ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಶಿವಮೊಗ್ಗ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಘಟನೆ ಹಿಂದೆ ಅನೇಕ ಸಂಘಟನೆಗಳು ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದರ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ಎಸ್ಡಿಪಿಐ ಮತ್ತು ಪಿಎಫ್ಐ ಬ್ಯಾನ್ ಬಗ್ಗೆ ಅನೇಕರು ಒತ್ತಾಯ ಮಾಡಿದ್ದಾರೆ. ಸರ್ಕಾರ ಕೂಡಾ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಈ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ತನಿಖೆ ಬಳಿಕ ಸಿಎಂ ಜೊತೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಮಾಡುವುದಾಗಿ ಸಚಿವರು ತಿಳಿಸಿದರು.
ಇದನ್ನೂ ಓದಿ :
