Featured

SDPI ಕಾಂಗ್ರೆಸ್ ನ ಪಾಪದ ಕೂಸು; ಸೊರಕೆಗೆ ಸೋಲಿನ ಭೀತಿ ಶುರುವಾಗಿದೆ: ಕುಯಿಲಾಡಿ ಸುರೇಶ್ ನಾಯಕ್ – Vishwanews24

ಎಸ್ಡಿಪಿಐ ಕಾಂಗ್ರೆಸ್ ನ ಪಾಪದ ಕೂಸು; ಸೊರಕೆಗೆ ಸೋಲಿನ ಭೀತಿ ಶುರುವಾಗಿದೆ: ಕುಯಿಲಾಡಿ ಸುರೇಶ್ ನಾಯಕ್

ಸಿಎಎ ವಿರುದ್ಧ ಎಸ್ಡಿಪಿಐ ನಡೆಸಿದ್ದ ಪ್ರತಿಭಟನೆಯಲ್ಲಿ ಶಾಮೀಲಾಗಿದ್ದ ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರಿಗೆ ಸೋಲಿನ ಭೀತಿ ಪ್ರಾರಂಭಗೊಂಡಿದೆ. ಮಾಜಿ ಸಿ.ಎಂ. ಸಿದ್ಧರಾಮಯ್ಯ ತನ್ನ ಆಡಳಿತಾವಧಿಯಲ್ಲಿ ನೂರಾರು ಎಸ್ಡಿಪಿಐ ಕಾರ್ಯಕರ್ತರ ಪ್ರಕರಣಗಳನ್ನು ಹಿಂಪಡೆದಿದ್ದು, ಕಾಂಗ್ರೆಸ್ ಮತ್ತು ಎಸ್ಡಿಪಿಐ ನಡುವಿನ ಸುಮಧುರ ಬಾಂಧವ್ಯಕ್ಕೆ ಇದಕ್ಕಿಂತ ಉತ್ತಮ ಉದಾಹರಣೆ ಬೇಕೆ? ಎಸ್ಡಿಪಿಐ ಕಾಂಗ್ರೆಸ್ ನ ಪಾಪದ ಕೂಸು. ಅಪಪ್ರಚಾರವೇ ಕಾಂಗ್ರೆಸ್ ಜೀವಾಳ ಎಂದು ಉಡುಪಿ ಜಿಲ್ಲಾ ಬಿಜೆಪಿ, ಜಿಲ್ಲಾ ಕಾಂಗ್ರೆಸ್ ನ ‘ಬಿಜೆಪಿ-ಎಸ್ಡಿಪಿಐ’ ಒಳ ಒಪ್ಪಂದ’ ಎಂಬ ಆರೋಪಕ್ಕೆ ತಿರುಗೇಟು ನೀಡಿದೆ.
ಮುಸ್ಲಿಂ ಸಮುದಾಯವನ್ನು ಕೇವಲ ವೋಟ್ ಬ್ಯಾಂಕ್ ರಾಜಕಾರಣಕ್ಕೆ ಉಪಯೋಗಿಸುತ್ತಾ ಬಂದಿರುವ ಕಾಂಗ್ರೆಸ್ ನ ಕುಟಿಲ‌ ನೀತಿ ಗುಟ್ಟಾಗಿ ಉಳಿದಿಲ್ಲ. ಪಿಎಫ್ಐ ಸಹಿತ 9 ದೇಶದ್ರೋಹಿ ಮತಾಂಧ ಸಂಘಟನೆಗಳನ್ನು ನಿಷೇಧಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ದಿಟ್ಟ ಕ್ರಮದಿಂದ ಕಂಗೆಟ್ಟಿರುವ ಕಾಂಗ್ರೆಸ್, ಬಿಜೆಪಿ ಮೇಲೆ ಗೂಬೆ ಕೂರಿಸುವ ವಿಫಲ ಯತ್ನದಿಂದ ನಿರಂತರ ನಿರಾಧಾರ ಆರೋಪದಲ್ಲಿ ತೊಡಗಿರುವುದು ಜನಜನಿತವಾಗಿದೆ. ದೇಶದೆಲ್ಲೆಡೆ ಅಸ್ತಿತ್ವವನ್ನು‌ ಕಳೆದುಕೊಂಡಿರುವ ಕಾಂಗ್ರೆಸ್ ಗೆ ಇದೀಗ ತಾನೇ ಪೋಷಿಸಿರುವ ಎಸ್ಡಿಪಿಐನಿಂದ ಸ್ಪರ್ಧೆ ಎದುರಿಸುವ ಅನಿವಾರ್ಯತೆ ಬಂದೊದಗಿರುವುದು ನುಂಗಲಾರದ ತುತ್ತೆನಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಸದಾ ಒಂದೇ ವರ್ಗದ ಓಲೈಕೆ ಹಾಗೂ ಬ್ರಹ್ಮಾಂಡ ಭ್ರಷ್ಟಾಚಾರದೊಂದಿಗೆ ಸುದೀರ್ಘ ಅವಧಿಗೆ ದೇಶವನ್ನಾಳಿದ ಕಾಂಗ್ರೆಸ್ ದೇಶದ್ರೋಹಿ ಮತಾಂಧ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಗಾಢ ಮೌನ ವಹಿಸಿದ್ದು, ಇದೀಗ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಐತಿಹಾಸಿಕ ದಿಟ್ಟ ಕ್ರಮದಿಂದ ಜ್ಞಾನೋದಯವಾದಂತೆ ನಟಿಸುತ್ತಿರುವುದು ಹಾಸ್ಯಾಸ್ಪದವೆನಿಸಿದೆ.
ಪಿಎಫ್ಐ ನಂತಹ ಸಮಾಜಘಾತುಕ ಮತಾಂಧ ಭಯೋತ್ಪಾದಕ ಸಂಘಟನೆಗಳನ್ನು ನಿಷೇಧಿಸಿ ಮಟ್ಟಹಾಕಿರುವ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಮತೀಯ ರಾಜಕೀಯ ಪಕ್ಷವೆನಿಸಿರುವ ಎಸ್ಡಿಪಿಐ ಅಥವಾ ಇನ್ನಿತರ ಯಾವುದೇ ಮತೀಯ ಸಂಘಟನೆಗಳು ದೇಶ ವಿರೋಧಿ ಕೃತ್ಯಗಳಲ್ಲಿ ತೊಡಗಿದರೆ ಏನೇನು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು ಚೆನ್ನಾಗಿಯೇ ಅರಿತಿದೆ. ಆದರೆ ಸೋಲಿನ‌ ಭಯದಿಂದಲೇ ಈ ಬಗ್ಗೆ‌ ಅತಿಯಾದ ಕಾಳಜಿ ತೋರುತ್ತಿರುವ ಕಾಂಗ್ರೆಸ್ ನ ಹತಾಶ ಮನೋಭಾವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್‌ ಕೊಡವೂರು ಹೇಳಿಕೆಯಿಂದ ಜಗಜ್ಜಾಹೀರಾಗಿದೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

15 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

16 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

16 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

19 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

19 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

19 hours ago