SDPI ನಿಷೇಧಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಮ್ಮತದ ನಿರ್ಧಾರ ; ಕಾನೂನು ಇಲಾಖೆ ವರದಿ ಬಳಿಕ ಕೇಂದ್ರಕ್ಕೆ ಶಿಫಾರಸು -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು : ಡಿಜೆ ಹಳ್ಳಿ ಗಲಭೆ ನಂತರ ರಾಜ್ಯದಲ್ಲಿ ಎಸ್ ಡಿ ಪಿ ಐ ಸಂಘಟನೆಯನ್ನು ನಿಷೇಧಿಸಬೇಕು ಎಂದು ಸಾಕಷ್ಟು ಒತ್ತಾಯದ ಮಾತುಗಳು ಕೇಳಿ ಬಂದಿತ್ತು. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈಗ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಎಸ್ ಡಿ ಪಿ ಐ ಸಂಘಟನೆಯ ನಿಷೇಧಕ್ಕೆ ಒಮ್ಮತದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.

ಇಂದು ರಾಜ್ಯ ಸಚಿವ ಸಂಪುಟ ಸಭೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ರಾಜ್ಯದಲ್ಲಿ ಎಸ್ ಡಿ ಪಿ ಐ ಸಂಘಟನೆಯನ್ನು ನಿಷೇಧಿಸುವ ಕುರಿತಂತೆ ಒಮ್ಮತದ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಎಸ್ ಡಿ ಪಿ ಐ ಸಂಘಟನೆಯನ್ನು ನಿಷೇಧ ಮಾಡುವ ಕುರಿತಂತೆ, ಎಸ್ ಡಿ ಪಿ ಐ ಸಂಘಟನೆ ರಾಜ್ಯದಲ್ಲಿ ದುಷ್ಕೃತ್ಯ ನಡೆಸಿದ ಬಗ್ಗೆ ಸಾಕ್ಷ್ಯ ಕಲೆ ಹಾಕಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಿದೆ. ವರದಿಯಲ್ಲಿ ಎಸ್ ಡಿ ಪಿ ಐ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಕೇಂದ್ರಕ್ಕೆ ಶಿಫಾರಸ್ಸು ಕೂಡ ಮಾಡಲಿದೆ.

ಎಸ್‌ಡಿಪಿಐ ಬ್ಯಾನ್ ಶಿಫಾರಸಿಗೆ  ದಾಖಲೆ ಕಲೆಹಾಕಿ ಪಕ್ಕಾ ವರದಿ ನೀಡುವಂತೆ ಕೇಳಲಾಗಿದೆ. ಕಾನೂನು ಮತ್ತು ಗೃಹ ಇಲಾಖೆ ವರದಿ ಬಳಿಕ ಶಿಫಾರಸು ಮಾಡಲು ನಿರ್ಧರಿಸಲಾಗಿದೆ