ಬೆಂಗಳೂರು: ಎಸ್‍ಎಸ್‍ಎಲ್‍ಸಿಯಲ್ಲಿ ಶಿಕ್ಷಣ ಇಲಾಖೆ ಈ ವರ್ಷ ನೀಡಿದ 20% ಗ್ರೇಸ್ ಅಂಕಗಳಿಗೆ ಖುದ್ದು ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ವರ್ಷದಿಂದ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನಿಡಲಾಗುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ವಿಧಾನಸೌಧದಲ್ಲಿಂದು ಇಲಾಖಾವಾರು ಪ್ರಗತಿ ಪರಿಶೀಲನೆ ಸಭೆ ನಡೆದ ವೇಳೆ ಗ್ರೇಸ್ ಅಂಕ ಕೊಟ್ಟ ವಿಚಾರ ಚರ್ಚೆಗೆ ಬಂತು. ಈ ವೇಳೆ ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಗರಂ ಆದ ಸಿಎಂ, ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಶಿಕ್ಷಣ ತಜ್ಞರು ಸೇರಿ ಹಲವರಿಂದ ವಿರೋಧ ಬಂದಿದೆ. ಗ್ರೇಸ್ ಮಾರ್ಕ್ಸ್ ಕೊಡೋದು ಅವೈಜ್ಞಾನಿಕ ಎಂಬ ಬಗ್ಗೆ ಅಭಿಪ್ರಾಯಗಳು ಬರುತ್ತಿವೆ.
ಎಸ್‍ಎಸ್‍ಎಲ್‍ಸಿಯಲ್ಲಿ (SSLC) ಗ್ರೇಸ್ ಮಾರ್ಕ್ಸ್ ಕೊಡೋದು ಅಗತ್ಯ ಇತ್ತಾ? ಪರೀಕ್ಷೆಯಲ್ಲಿ ಈ ಬಾರಿ ಕಠಿಣ ಕ್ರಮ ಕೈಗೊಂಡಿದ್ದು ಸರಿ. ಆದರೆ ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದು ಸರಿ ಇತ್ತಾ ಎಂದು ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸಿಎಂ ಪ್ರಶ್ನೆ ಮಾಡಿದ್ದಾರೆ. ಅಲ್ಲದೇ ಮುಂಬರುವ ಶೈಕ್ಷಣಿಕ ವರ್ಷದಿಂದ ಗ್ರೇಸ್ ಮಾರ್ಕ್ಸ್ ಕೊಡುವ ಬಗ್ಗೆ ಮರುಪರಿಶೀಲನೆ ಮಾಡುವಂತೆ ಸಿಎಂ ಸೂಚನೆ ನೀಡಿದ್ದಾರೆ.
ಸಭೆ ಬಳಿಕ ಮಾತಾಡಿದ ಮಧು ಬಂಗಾರಪ್ಪ, ಈ ವರ್ಷ ಕೊಟ್ಟಿರುವ ಗ್ರೇಸ್ ಮಾರ್ಕ್ಸ್ ನಲ್ಲಿ ಯಾವುದೂ ಬದಲಾವಣೆ ಇಲ್ಲ. ಮುಂದಿನ ವರ್ಷದಿಂದ 20% ಗ್ರೇಸ್ ಮಾರ್ಕ್ಸ್ ಕೊಡುವ ಪದ್ಧತಿ ಇರಲ್ಲ. ಇನ್ನು ಮುಂದೆ ಹಿಂದಿನ ಪದ್ಧತಿಯೇ ಮುಂದುವರಿಯಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಪರೀಕ್ಷಾ ನಡವಳಿಕೆ ಸರಿ ಮಾಡಲು ಮುಂದಾಗಿದ್ದೆವು. ಈ ವರ್ಷ ಮಾತ್ರ ಗ್ರೇಸ್ ಮಾರ್ಕ್ಸ್ ಕೊಡುವ ತೀರ್ಮಾನ ಮಾಡಲಾಗಿತ್ತು. ಯಾವಾಗಲೂ 5% ಗ್ರೇಸ್ ಅಂಕ ಇರ್ತಿತ್ತು. ಕೋವಿಡ್ ವೇಳೆ 10% ಮಾಡಲಾಗಿತ್ತು. ಇದೀಗ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿ ಪಾಸಾಗುವಂತೆ ಮಾಡಲು 20% ಗ್ರೇಸ್ ಮಾರ್ಕ್ಸ್ ನೀಡಲಾಗಿತ್ತು. ಇದು ಈ ವರ್ಷಕ್ಕೆ ಯಾವ ಸಮಸ್ಯೆ ಇಲ್ಲ. ಮುಂದಿನ ವರ್ಷದಿಂದ ಇದು ಇರಲ್ಲ ಅಂತ ಮಧು ಬಂಗಾರಪ್ಪ ತಿಳಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…