Featured

SSLC ಪರೀಕ್ಷೆಗೆ ಹೊಸ ಗೈಡ್​ಲೈನ್ಸ್ ಬಿಡುಗಡೆ : ವಿದ್ಯಾರ್ಥಿ, ಶಿಕ್ಷಕರಿಗೆ ಖಡಕ್ ಸೂಚನೆ – vishwanews24

SSLC ಪರೀಕ್ಷೆಗೆ ಹೊಸ ಗೈಡ್​ಲೈನ್ಸ್ ಬಿಡುಗಡೆ : ವಿದ್ಯಾರ್ಥಿ, ಶಿಕ್ಷಕರಿಗೆ ಖಡಕ್ ಸೂಚನೆ

ಬೆಂಗಳೂರು : ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಬೆನ್ನಲ್ಲೇ ರಾಜ್ಯ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು, ಮುಖ್ಯ ಪರೀಕ್ಷೆಗೆ ಹೊಸ ಗೈಡ್​ಲೈನ್ಸ್ ಬಿಡುಗಡೆ ಮಾಡಿದೆ.

ಎಸ್ಎಸ್ಎಲ್​ಸಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ಮೊಬೈಲ್ ನಿರ್ಬಂಧಿಸಲಾಗಿದೆ. ಇದೀಗ ಶಿಕ್ಷಕರು ಸಹ ಪರೀಕ್ಷೆ ವೇಳೆ ಮೊಬೈಲ್ ಬಳಸುವಂತಿಲ್ಲ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಅಲ್ಲದೇ 2 ಹಾಗೂ 3ನೇ ಪರೀಕ್ಷೆ ಆಯುಕ್ತರ ನೇತೃತ್ವದಲ್ಲಿ ನಡೆಯಲಿವೆ.

ಈ ಹಿಂದಿನ ಪರೀಕ್ಷೆಗಳನ್ನು ಕರ್ನಾಟಕ ಪರೀಕ್ಷಾ ಮಂಡಳಿ ಮೌಲ್ಯ ನಿರ್ಣಯ ಮಂಡಳಿ ನೇತೃತ್ವದಲ್ಲಿ ನಡೆಸಲಾಗಿತ್ತು. ಆದರೆ ಇದೀಗ ಹೊಸ ಗೈಡ್​​ಲೈನ್ಸ್​ ಪ್ರಕಾರ 2 ಹಾಗೂ 3ನೇ ಪರೀಕ್ಷೆ ಆಯುಕ್ತರ ನೇತೃತ್ವದಲ್ಲಿ ನಡೆಯಲಿದ್ದು, ಡಿಡಿಪಿಐ ಹಾಗೂ ಬಿಇಒಗಳಿಗೆ ಪರೀಕ್ಷೆಯ ಜವಾಬ್ದಾರಿ ನೀಡಲಾಗಿದೆ.

ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಮೊಬೈಲ್​ ತರುವಂತಿಲ್ಲ. ಜೊತೆಗೆ ಶಿಕ್ಷಕರು ಸಹ ಪರೀಕ್ಷೆ ವೇಳೆ ಮೊಬೈಲ್ ಬಳಸುವಂತಿಲ್ಲ. ಇನ್ನು ಪ್ರಶ್ನೆಪತ್ರಿಕೆ ಸೋರಿಕೆ, ಅವ್ಯಹಾರ ನಡೆಸದಂತೆ ಖಡಕ್ ಸೂಚನೆ ನೀಡಲಾಗಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದವರ ವಿರುದ್ಧ ಆಯಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬೇಕು.

ಪ್ರಶ್ನೆಪತ್ರಿಕೆ ಮುಖ್ಯೋಪಾಧ್ಯಾಯರೇ ಡೌನ್​ಲೋಡ್ ಮಾಡಬೇಕು. ಜೊತೆಗೆ ಪ್ರಶ್ನೆಪತ್ರಿಕೆ ಗೌಪ್ಯತೆ ಕಾಪಾಡಬೇಕು ಹಾಗೇ ಪ್ರಾಂಶುಪಾಲರು ಸಹ ಪರೀಕ್ಷಾ ಕೇಂದ್ರಗಳಿಗೆ ಭೇಟಿ ಪರಿಶೀಲನೆ ಮಾಡಬೇಕು ಎಂದು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದ ಹೊಸ ಮಾರ್ಗಸೂಚಿಯಲ್ಲಿ ಖಡಕ್ ಆಗಿ ತಿಳಿಸಲಾಗಿದೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

15 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

15 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

15 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

15 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

16 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

16 hours ago